Saturday, June 28, 2025
spot_imgspot_img
spot_imgspot_img

ಬೆಳ್ತಂಗಡಿ: ಕ್ರಿಸ್ಮಸ್ ಹಬ್ಬಕ್ಕೆ ಲೈಟಿಂಗ್ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ವಿದ್ಯಾರ್ಥಿ ಸಾವು..!

- Advertisement -
- Advertisement -

ಬೆಳ್ತಂಗಡಿ: ಕ್ರಿಸ್ಮಸ್ ಹಬ್ಬಕ್ಕೆ ಮನೆಯಲ್ಲಿ ಲೈಟಿಂಗ್ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕ ಕಾರಂದೂರು ಪೇರೋಡಿತ್ತಾಯ ಕಟ್ಟೆ ಶಾಲಾ ಬಳಿ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿಯನ್ನು ತೆಂಕ ಕಾರಂದೂರು ಪೇರೋಡಿತ್ತಾಯನ ಕಟ್ಟೆ ಶಾಲಾ ಬಳಿಯ ಸ್ಟೀಪನ್ (14) ಎಂದು ಗುರುತಿಸಲಾಗಿದೆ. ಈತ ಬೆಳ್ತಂಗಡಿ ಸಂತ ತೆರೇಸಾ ಶಾಲೆಯ 9 ನೇ ತರಗತಿ ವಿದ್ಯಾರ್ಥಿ.

ಕ್ರಿಸ್ ಮಸ್ ಪ್ರಯುಕ್ತ ಇಂದು ಸಂಜೆ ಮನೆಗೆ ಸಾಂತಾಕ್ಲಾಸ್ ಬರುವ ಹಿನ್ನೆಲೆಯಲ್ಲಿ ಮನೆಗೆ ಆಲಂಕಾರ ಮಾಡುವ ವೇಳೆ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣ ಸ್ಥಳೀಯರು ಆಸ್ಪತ್ರೆಗೆ ಕರೆದುಕೊಂಡು ಬಂದರೂ ಅಷ್ಟೊತ್ತಿಗಾಗಲೇ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.

ಮೃತ ವಿದ್ಯಾರ್ಥಿಯ ತಂದೆ ಹಾಗೂ ತಾಯಿ ಕೆಲವು ವರ್ಷಗಳ ಹಿಂದೆ ಮೃತ ಪಟ್ಟಿದ್ದರು. ಈತ ಅಜ್ಜಿ ಮನೆಯಲ್ಲಿದ್ದು ಶಿಕ್ಷಣ ಪಡೆಯುತ್ತಿದ್ದ. ಇಂದು ಶಾಲೆಗೆ ರಜೆ ಮಾಡಿ ಮನೆಯಲ್ಲಿ ಅಲಂಕಾರ ಮಾಡುತ್ತಿದ್ದ ಎನ್ನಲಾಗಿದೆ.

- Advertisement -

Related news

error: Content is protected !!