Friday, July 31, 2026
spot_imgspot_img
spot_imgspot_img

ಪುತ್ತೂರು: ಕೆ ಎಸ್ ಆರ್ ಟಿಸಿ ಬಸ್ ಮತ್ತು ಬೈಕ್‌ ಡಿಕ್ಕಿ; ಬೈಕ್ ಸವಾರ ಮೃತ್ಯು

- Advertisement -
- Advertisement -

ಪುತ್ತೂರು ತಾಲೂಕು ಕಬಕ ಗ್ರಾಮದ ಮುರ ಎಂಬಲ್ಲಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿ, ಪುತ್ತೂರು ಕಡೆಯಿಂದ ಕೆದಿಲ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ KA-21-EB-7225 ನೇ ನಂಬ್ರದ ಮೋಟಾರ್‌ ಸೈಕಲಿಗೆ KSRTC ಬಸ್ಸು ಅಪಘಾತವಾಗಿ, ಮೋಟಾರ್‌ ಸೈಕಲ್ ಸವಾರ ಅಬ್ದುಲ್‌ ಕುಂಞಿ (66) ರವರು ಮೋಟಾರ್‌ ಸೈಕಲ್‌ ಸಮೇತ ರಸ್ತೆಗೆ ಬಿದ್ದು, ಗಂಭೀರ ಗಾಯಗೊಂಡಿರುತ್ತಾರೆ. ಅವರನ್ನು ಚಿಕಿತ್ಸೆಯ ಬಗ್ಗೆ ಪುತ್ತೂರು ಮಹಾವೀರ ಆಸ್ಪತ್ರೆಗೆ ಕರೆ ತಂದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ಈ ಬಗ್ಗೆ ಪುತ್ತೂರು ಸಂಚಾರ ಪೊಲೀಸ್‌ ಠಾಣೆಯಲ್ಲಿ ಅ.ಕ್ರ: 139/2024 ಕಲಂ:281,106 ಬಿಎನ್‌ಎಸ್-2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!