Wednesday, July 2, 2025
spot_imgspot_img
spot_imgspot_img

ಮಾಜಿ ಟ್ರೈನಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ

- Advertisement -
- Advertisement -

ನವದೆಹಲಿ: ಮಾಜಿ ಟ್ರೈನಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿ ತೀರ್ಪು ನೀಡಿದೆ.

ದೈಹಿಕ ನ್ಯೂನತೆ ಬಗ್ಗೆ ಸುಳ್ಳು ಹೇಳಿ ಹೆಸರು ಮತ್ತು ಉಪನಾಮವನ್ನು ಬದಲಿಸಿ ನಕಲಿ ಒಬಿಸಿ ಪ್ರಮಾಣಪತ್ರವನ್ನು ಮಾಡಿಸಿಕೊಂಡಿದ್ದ ಆರೋಪ ಪೂಜಾ ಖೇಡ್ಕರ್ ಅವರ ಮೇಲಿದೆ. ಈ ಸಂಬಂಧ ಅವರು ನಿರೀಕ್ಷಣಾ ಜಾಮೀನಿಗಾಗಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಆಕೆಯ ಉದ್ದೇಶಗಳು ಅಧಿಕಾರಿಗಳನ್ನು ವಂಚಿಸುವುದಾಗಿತ್ತು. ಅವಳ ನಿರ್ಧಾರ ದೊಡ್ಡ ಪಿತೂರಿಯ ಭಾಗವಾಗಿತ್ತು. ಆಕೆಯ ವಿರುದ್ಧದ ಆರೋಪಗಳು ಅಧಿಕಾರಿಗಳಿಗೆ ಮಾತ್ರವಲ್ಲದೆ, ರಾಷ್ಟ್ರದ ದೊಡ್ಡ ವಂಚನೆಗೆ ಉದಾಹರಣೆಯಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಜೊತೆಗೆ ಪೂಜಾ ಖೇಡ್ಕರ್ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನನ್ನು ನಿರಾಕರಿಸಿದೆ.

- Advertisement -

Related news

error: Content is protected !!