- Advertisement -
- Advertisement -






ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪೂಂಛಿ ಜಿಲ್ಲೆಯಲ್ಲಿನಿನ್ನೆ ಸಂಜೆ ಸೇನಾ ವಾಹನ 300 ಅಡಿ ಆಳದ ಕಂದಕಕ್ಕೆ ಉರುಳಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ ಐವರು ಸೈನಿಕರಲ್ಲಿ ಮೂವರು ಕನ್ನಡಿಗರೆಂದು ತಿಳಿದು ಬಂದಿದೆ.
ಸೇನಾ ವಾಹನಲ್ಲಿ 18 ಯೋಧರು ಪ್ರಯಾಣಿಸುತ್ತಿದ್ದು, ಇವರಲ್ಲಿ 5 ಮಂದಿ ಹುತಾತ್ಮರಾಗಿದ್ದಾರೆ. ಉಳಿದವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.ಅಪಘಾತದಲ್ಲಿ ಮೃತಪಟ್ಟ ಯೋಧ ಕರ್ನಾಟಕ ಮೂಲದ ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ಬಿಜಾಡಿಯ ಯೋಧ ಅನೂಪ್, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕುಪ್ಪನವಾಡಿ ಗ್ರಾಮದ ದಯಾನಂದ್, ಬಾಗಲಕೋಟೆ ಮೂಲದ ಯೋಧ ಮಹೇಶ್ ನಾಗಪ್ಪ ಮಾರಿಗೊಂಡ ಹುತಾತ್ಮರಾಗಿದ್ದಾರೆ.
- Advertisement -








