Saturday, June 27, 2026
spot_imgspot_img
spot_imgspot_img

ವಿಷ ಸೇವಿಸಿ ಯುವತಿ ಆತ್ಮಹತ್ಯೆ..!

- Advertisement -
- Advertisement -

ಶಿವಮೊಗ್ಗ: ಮೊಬೈಲ್ ಹೆಚ್ಚು ನೋಡ್ಬೇಡ ಎಂದು ಪೋಷಕರು ಬುದ್ಧಿ ಹೇಳಿದ್ದಕ್ಕೆ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾರನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಧನುಶ್ರೀ (20) ಎಂದು ಗುರುತಿಸಲಾಗಿದೆ.

ಧನುಶ್ರೀ ಶಿವಮೊಗ್ಗದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಳು. ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಿದ್ದಳು. ಇದನ್ನು ಗಮನಿಸಿದ್ದ ಪೋಷಕರು ಮೊಬೈಲ್ ಹೆಚ್ಚು ಬಳಸಬೇಡ, ಓದಿನ ಕಡೆ ಗಮನ ಕೊಡು ಎಂದು ಬುದ್ಧಿ ಹೇಳಿದ್ದರು.

ಇದೇ ವಿಚಾರಕ್ಕೆ ಮನನೊಂದ ಯುವತಿ ಕಳೆದ 3 ದಿನದ ಹಿಂದೆ ಮನೆಯಲ್ಲಿ ವಿಷ ಸೇವಿಸಿದ್ದಳು. ವಿಷ ಸೇವಿಸಿದ್ದ ಯುವತಿಯನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು (ಗುರುವಾರ) ಯುವತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಈ ಬಗ್ಗೆ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!