Friday, June 26, 2026
spot_imgspot_img
spot_imgspot_img

ಹುತಾತ್ಮರಾದ ಯೋಧರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಿದ ಸಿದ್ದರಾಮಯ್ಯ

- Advertisement -
- Advertisement -

ಬೆಳಗಾವಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಅಪಘಾತಕ್ಕೀಡಾಗಿ ಹುತಾತ್ಮರಾದ ಯೋಧರ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಅಂತಿಮ ಗೌರವ ಸಲ್ಲಿಸಿದರು.ಸರ್ಕಾರದಿಂದ ನಿಯಮಾನುಸಾರ ಹುತಾತ್ಮರ ಕುಟುಂಬಕ್ಕೆ ಸಲ್ಲಬೇಕಾದ ಸಕಲ ನೆರವನ್ನೂ ಒದಗಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಅವರು ಭರವಸೆ ನೀಡಿದರು.ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾ‌ರ್ ದಯಾನಂದ ತಿರುಕಣ್ಣನವರ, ಮಹೇಶ ಮಾರಿಗೊಂಡ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದರು. ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ಯೋಧರ ಬದುಕು, ಜೀವನ, ವೃತ್ತಿ ಅತ್ಯಂತ ಉನ್ನತವಾದದು. ನಮ್ಮ ರಾಜ್ಯದ ಯೋಧರು ಅಪಘಾತದಲ್ಲಿ ಹುತಾತ್ಮರಾಗಿರುವುದು ಅತ್ಯಂತ ನೋವಿನ ಸಂಗತಿ. ನಾಲ್ವರು ಯೋಧರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರ ನೋವಿನಲ್ಲಿ ನಾನು ಭಾಗಿಯಾಗುತ್ತೇನೆ ಎಂದರು.

- Advertisement -

Related news

error: Content is protected !!