- Advertisement -
- Advertisement -





ಮಡಿಕೇರಿ: ಕಳೆದೆರಡು ವರ್ಷಗಳಿಂದ ಸೋಮವಾರಪೇಟೆ ತಾಲೂಕಿನ ಕೆಲ ಗ್ರಾಮಗಳಲ್ಲಿ ಶ್ರೀಗಂಧ ಮರಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪದಡಿ ಹೊರ ಜಿಲ್ಲೆಯ ಆರೋಪಿಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ.ಬಂಧಿತ ಆರೋಪಿಗಳು ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಬೀರನಹಳ್ಳಿ ಕಾವಲು ಗ್ರಾಮದ ಚಂದ್ರು ಹಾಗೂ ಸುರೇಶ್ ಎಂದು ತಿಳಿದು ಬಂದಿದೆ.ಆರೋಪಿಗಳು ಸಣ್ಣ ಗಾತ್ರದ ಮರಗಳನ್ನು ಕಡಿದು ಮೂಟೆಗಳಲ್ಲಿ ಸಾಗಿಸುತ್ತಿದ್ದರು. ಗಂಧದ ತುಂಡುಗಳನ್ನು ಬೆಮ್ಮತ್ತಿಯ ವ್ಯಕ್ತಿಯೋರ್ವನಿಗೆ ಮಾರಾಟ ಮಾಡುತ್ತಿದ್ದರು ಎಂಬ ಮಾಹಿತಿ ಪಡೆದ ಅರಣ್ಯ ಅಧಿಕಾರಿಗಳು ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ತಿಳಿದು ಬಂದಿದೆ.
- Advertisement -








