- Advertisement -
- Advertisement -





ಉಡುಪಿ: ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಉಡುಪಿಯ ಕಟಪಾಡಿ- ಶಿರ್ವ ರಾಜ್ಯ ಹೆದ್ದಾರಿ ಸುಭಾಷ್ ನಗರದಲ್ಲಿ ನಡೆದಿದೆ.
ಬೈಕ್‌ನಲ್ಲಿದ್ದ ತಂದೆ ಮತ್ತು ಮಗಳು ಶಂಕರಪುರ ಕಡೆ ಹೋಗುತ್ತಿರುವ ಸಂದರ್ಭ ಕಂಠ ಪೂರ್ತಿ ಕುಡಿದಿದ್ದ ಕಾರು ಚಾಲಕ ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಲಿಸಿ ಬೈಕ್‌ಗೆ ಡಿಕ್ಕಿ ಹೊಡೆಸಿದ್ದಾನೆ. ಇದರಿಂದ ಬೈಕ್‌ನಲ್ಲಿದ್ದ ಸವಾರರು ಗಂಭೀರ ಗಾಯಗೊಂಡಿದ್ದಾರೆ.
ಸ್ಥಳೀಯರು ಕೂಡಲೇ ಗಾಯಾಳುಗಳನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
- Advertisement -