




ಜಮ್ಮು ಕಾಶ್ಮೀರದಲ್ಲಿ ನಡೆದ ಸೇನಾ ವಾಹನ ಅಪಘಾತ ಪ್ರಕರಣಕ್ಕೆ ಸಂಭಂದಿಸಿದಂತೆ ಗಂಭೀರ ಸ್ಥಿತಿಯಲ್ಲಿದ್ದ ಕೊಡಗಿನ ಸೈನಿಕ ವಿಧಿವಶರಾಗಿದ್ದಾರೆಕೊಡಗಿನ ಆಲೂರು ಸಿದ್ದಾಪುರದ ದಿವಿನ್ಎಂಬ 28 ವರ್ಷದ ಸೈನಿಕ ಸೇನಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದವರು. ಜಮ್ಮು ಕಾಶ್ಮೀರದಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಆಲೂರು ಸಿದ್ದಾಪುರ ಗ್ರಾಮದ ಸೈನಿಕ ಪಳಂಗೋಟಿ ದಿವಿನ್ ರವರಿಗೆ ಶ್ರೀನಗರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ದಿವಿನ್ ತಾಯಿ ಜಯ ಕೂಡ ಆಸ್ಪತ್ರೆ ತಲುಪಿದ್ದರು. ಅಮ್ಮನ ಕರೆಗೆ ದಿವಿನ್ ಹುಬ್ಬು ಹಾರಿಸಿ ಸ್ಪಂದಿಸಿದ್ದರು.ಆದ್ರೆ ಶ್ವಾಸಕೋಶಕ್ಕೆ ತೀವ್ರ ಹಾನಿ ಆದ ಹಿನ್ನಲೆ ಇಂದು ರಾತ್ರಿ ಧಿವಿನ್ ಕೊನೆಯುಸಿರು ಎಳೆದಿದ್ದಾರೆ.ತಂದೆ ತಾಯಿಗೆ ಏಕೈಕ ಮಗನಾಗಿದ್ದ ಧಿವಿನ್ 10 ವರ್ಷದ ಹಿಂದೆ ಸೇನೆಗೆ ಸೇರಿದ್ದರು. ಸೇನಾ ವಾಹನ ಪ್ರಪಾತಕ್ಕೆ ಬಿದ್ದು ಅದರಲ್ಲಿ ಇದ್ದ 4 ಸೈನಿಕರು ಸ್ಥಳದಲ್ಲಿ ಸಾವನ್ನಪ್ಪಿದ್ದರು. ಚಿಂತಾಜನಕ ಸ್ಥಿತಿಯಲ್ಲಿದ್ದ ದಿವಿನ್ ಚಿಕಿತ್ಸೆಗೆ ಸ್ಪಂದಿಸದೆ ಇದೀಗ ಸಾವನ್ನಪ್ಪಿದ್ದಾರೆ .








