

ಹಿರಿಯ ಪತ್ರಕರ್ತರಾದ ಸನ್ಮಾನ್ಯ ಸುಂದರ.ಕೆ( ಕಬಕ ) ಇವರು ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮ ಕ್ಷೇತ್ರದಲ್ಲಿ 28 ವರ್ಷಗಳಿಂದ ನಿರಂತರವಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದು. ಸುಂದರ. ಕೆ ಇವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಬಕ ಗ್ರಾಮದವರು. ಮಂಗಳೂರಿನ ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮದ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಬೆಂಗಳೂರಿನಲ್ಲಿ ವೃತ್ತಿ ಬದುಕು ಆರಂಭಿಸಿದ ಇವರು ಮೊದಲಿಗೆ ಉತ್ತರ ಕರ್ನಾಟಕ ದಿನಪತ್ರಿಕೆಯಲ್ಲಿ ರಾಜಕೀಯ ವರದಿಗಾರರಾಗಿ ಕಾರ್ಯನಿರ್ವಹಿಸಿ ನಂತರ ಸುಪ್ರಭಾತ ಟಿವಿ, ಜನವಾಹಿನಿ ದಿನಪತ್ರಿಕೆ, ಉದಯ ಟಿವಿ ಯಲ್ಲಿ ರಾಜಕೀಯ ವರದಿಗಾರರಾಗಿ, ಹೈದರಾಬಾದ್ ಈ ಟಿವಿಯಲ್ಲಿ ಹಿರಿಯ ಬುಲೆಟಿನ್ ಪ್ರೊಡ್ಯೂಸರ್ , ಝಿ ಟಿವಿ ಕನ್ನಡದಲ್ಲಿ ಚೀಫ್ ಬುಲೆಟಿನ್ ಪ್ರೊಡ್ಸೂಸರ್ , ಸುವರ್ಣ ಸುದ್ದಿ ವಾಹಿನಿಯಲ್ಲಿ ನ್ಯೂಸ್ ಎಡಿಟರ್ ಆಗಿ ಸೇವೆ ಸಲ್ಲಿಸಿದ್ದಾರೆ ನಂತರ ಜನಶ್ರೀ ಕನ್ನಡ ವಾಹಿನಿಯಲ್ಲಿ ಸುದ್ದಿ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿ, ಹಲವು ವರ್ಷಗಳಿಂದ ಹವ್ಯಾಸಿ ಪತ್ರಕರ್ತರಾಗಿ ರಾಜಕೀಯ, ಸಾಮಾಜಿಕ ,ಸಾಂಸ್ಕೃತಿಕ ಮತ್ತು ಸಮಾಜಮುಖಿ ಬರಹಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ. ತಮ್ಮ ಪತ್ರಿಕೋದ್ಯಮದ ಅನುಭವವನ್ನ ಪತ್ರಕರ್ತರಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ.








