Monday, October 26, 2026
spot_imgspot_img
spot_imgspot_img

ಉಜಿರೆ: ಕಾರು- ಸ್ಕೂಟರ್ ಡಿಕ್ಕಿ; ಮಹಿಳೆ ಗಂಭೀರ

- Advertisement -
- Advertisement -

ಉಜಿರೆ: ಕಾರು ಹಾಗೂ ದ್ವಿಚಕ್ರ ವಾಹನ ಡಿಕ್ಕಿ ಹೊಡೆದುಕೊಂಡ ಪರಿಣಾಮ ಮಹಿಳೆಯೊಬ್ಬರು ಗಂಭೀರ ಗಾಯಗೊಂಡ ಘಟನೆ ಚಾರ್ಮಾಡಿ ರಸ್ತೆ ಸಮೀಪದ ವಿಲೇಜ್ ಹೋಟೆಲ್ ಬಳಿ ನಡೆದಿದೆ.ಸ್ಕೂಟರ್ ನಲ್ಲಿದ್ದ ಮಹಿಳೆಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.ಸ್ಕೂಟರ್ ಸವಾರೆ ಉಜಿರೆಯಿಂದ ಚಾರ್ಮಾಡಿ ಕಡೆಗೆ ಬರುತ್ತಿದ್ದು, ಕಾರು ಚಾರ್ಮಾಡಿಯಿಂದ ಉಜಿರೆ ಕಡೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಎರಡು ವಾಹನದ ಮುಂಭಾಗ ಸಂಪೂರ್ಣ ಹಾನಿಯಾಗಿದ್ದು, ಬೆಳ್ತಂಗಡಿ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!