- Advertisement -
- Advertisement -


ಶಿವಮೊಗ್ಗ: ಅಣ್ಣನೇ ತಮ್ಮನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದ್ದು,ಆರೋಪಿಯನ್ನು ವಶಕ್ಕೆ ಪಡೆದ ಘಟನೆ ಶಿವಮೊಗ್ಗ ತಾಲೂಕಿನ ಅನುಪಿನಕಟ್ಟೆಯ ಲಂಬಾಣಿ ತಾಂಡಾದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಗಿರೀಶ್ ನಾಯ್ಕ (30) ಎಂದು ಗುರುತಿಸಲಾಗಿದೆ.
ಲಂಬಾಣಿ ತಾಂಡಾದ ಮನೆಯೊಳಗೆ ಲೋಕೇಶ್ ನಾಯ್ಕ ಎಂಬಾತ ತನ್ನ ಸಹೋದರ ಗಿರೀಶ್‌ನನ್ನು ಕೊಲೆ ಮಾಡಿದ್ದಾನೆ. ವೈಯಕ್ತಿಕ ಕಾರಣಕ್ಕೆ ಇಬ್ಬರ ಮಧ್ಯೆ ಗಲಾಟೆಯಾಗಿ ಹತ್ಯೆಯಾಗಿದೆ ಎಂದು ಹೇಳಲಾಗುತ್ತಿದೆ. ಗಿರೀಶನ ತಲೆ ಭಾಗಕ್ಕೆ ತೀವ್ರ ಗಾಯವಾಗಿ, ರಕ್ತಸ್ರಾವ ಉಂಟಾಗಿ ಸಾವನ್ನಪ್ಪಿದ್ದಾನೆ. ಲೋಕೇಶ್‌ನನ್ನು ವಶಕ್ಕೆ ಪಡೆಯಲಾಗಿದೆ. ಘಟನಾ ಸ್ಥಳಕ್ಕೆ ತುಂಗಾ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
- Advertisement -