Saturday, June 28, 2025
spot_imgspot_img
spot_imgspot_img

ಪಡುಬಿದ್ರೆ: ಅಪರಿಚಿತ ವಾಹನ ಢಿಕ್ಕಿ ಹೊಡೆದು ಪಾದಚಾರಿ ಸ್ಥಳದಲ್ಲೇ ಸಾವು..!

- Advertisement -
- Advertisement -

ಪಡುಬಿದ್ರೆ: ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಚ್ಚಿಲದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಹಾವೇರಿ ಮೂಲದ ಮಂಜುನಾಥ್ (48) ಎಂದು ಗರುತಿಸಲಾಗಿದೆ.

ಮಂಜುನಾಥ್ ಅವರು ನಡೆದುಕೊಂಡು ಹೋಗುತ್ತಿದ್ದಾಗ ಅವರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಪರಾರಿಯಾಗಿದೆ. ಢಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡಿದ್ದ ಅವರು ಕೊನೆಯುಸಿರೆಳೆದಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಇಲ್ಲಿ ನಿರಂತರವಾಗಿ ಅಪಘಾತಗಳಾಗುತ್ತಿವೆ. ಕಳೆದೊಂದು ತಿಂಗಳಲ್ಲಿ ಹಲವು ಅಪಘಾತಗಳು ಸಂಭವಿಸಿದ್ದು, ಈ ಪೈಕಿ 6 ಮಂದಿ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯರು ಹೆದ್ದಾರಿ ಪ್ರಾಧಿಕಾರದ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

Related news

error: Content is protected !!