Friday, November 6, 2026
spot_imgspot_img
spot_imgspot_img

ಮಂಗಳೂರು: ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ; ಮೂವರ ಬಂಧನ

- Advertisement -
- Advertisement -

ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ತಮಿಳು ನಾಡಿನ ತಿರುನಲ್ವೇಲಿಯಲ್ಲಿ ಬಂಧಿಸಿದ್ದಾರೆ.ಈ ಬಗ್ಗೆ ಮಂಗಳೂರಿನಲ್ಲಿ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು ಸೋಮವಾರ(ಜ20) ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.

ಮೂವರು ಆರೋಪಿಗಳ ತೀವ್ರ ವಿಚಾರಣೆ ನಡೆಸಲಾಗುತ್ತಿದ್ದು, ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ಪಡೆದುಕೊಂಡ ನಂತರ ಹೆಚ್ಚಿನ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ.ಬಂಧಿತ ಆರೋಪಿಗಳ ಬಳಿ ಶಸ್ತ್ರಾಸ್ತ್ರಗಳು, 2 ತಲವಾರು, 2 ಪಿಸ್ತೂಲುಗಳು ಮತ್ತು ಗೋಣಿಚೀಲಗಳನ್ನು ಕೂಡ ವಶ ಪಡಿಸಿಕೊಂಡಿರುವ ಬಗ್ಗೆ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.ಮುಂಬಯಿಯ ಧಾರಾವಿಯ ಡೆಡ್ಲಿ ಗ್ಯಾಂಗ್ ಸೇರಿದ ಮುರುಗನ್, ಮಣಿವಣ್ಣನ್ ಬಂಧಿತ ಆರೋಪಿಗಳ ಪೈಕಿ ಇಬ್ಬರು ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!