Saturday, June 28, 2025
spot_imgspot_img
spot_imgspot_img

ಉಡುಪಿ: ಮಹಡಿಯಿಂದ ಜಿಗಿದು ಪಶ್ಚಿಮ ಬಂಗಾಳದ ವ್ಯಕ್ತಿ ಆತ್ಮಹತ್ಯೆ..!

- Advertisement -
- Advertisement -

ಉಡುಪಿ: ಪಶ್ಚಿಮ ಬಂಗಾಳದ ವ್ಯಕ್ತಿಯೋರ್ವ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಪಶ್ಚಿಮ ಬಂಗಾಳ ಮೂಲದ ಕಾಂಕ್ರೀಟ್ ಸಾಗಾಟದ ಟ್ರಕ್ ಚಾಲಕ ರವಿ ಮೋಹಂತ್ (24) ಎಂದು ಗುರುತಿಸಲಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.ಮಣಿಪಾಲ ಪೊಲೀಸ್ ಅಧಿಕಾರಿ ಎಎಸ್‌ಐ ನಾಗೇಶ್ ನಾಯಕ್ ಮತ್ತು ತನಿಖಾ ಸಹಾಯಕ ಸುಕುಮಾರ್ ಶೆಟ್ಟಿ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.

ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರ ನೆರವಿನೊಂದಿಗೆ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ರವಾನಿಸಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

- Advertisement -

Related news

error: Content is protected !!