Monday, July 7, 2025
spot_imgspot_img
spot_imgspot_img

76ನೇ ಗಣರಾಜ್ಯೋತ್ಸವ ಸಂಭ್ರಮ: ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಕರ್ತವ್ಯಪಥದಲ್ಲಿ ಸೇನಾಶಕ್ತಿ ಅನಾವರಣ

- Advertisement -
- Advertisement -

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 76ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಕರ್ತವ್ಯಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧ್ವಜಾರೋಹಣ ನೆರವೇರಿಸಿದರು.ಈ ವೇಳೆ ರಾಷ್ಟ್ರಪತಿಗಳಿಗೆ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಸಾಥ್‌ ನೀಡಿದರು. ನಂತರ ಭವ್ಯ ಮೆರವಣಿಗೆ ಪ್ರಾರಂಭವಾಯಿತು. ಸಮಾರಂಭದಲ್ಲಿ ಇಂಡೋನೇಷ್ಯಾ ಅಧ್ಯಕ್ಷ ಪ್ರಬೊವೊ ಸುಬಿಯಾಂಟೊ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದಾರೆ.ಧ್ವಜಾರೋಹಣದ ಬೆನ್ನಲ್ಲೇ ರಾಷ್ಟ್ರಪತಿಗಳಿಗೆ 21 ತೋಪಿನ ಸನ್ಮಾನ ನೀಡಿ ಗೌರವಿಸಲಾಯಿತು. ಬಳಿಕ ಗಣರಾಜ್ಯೋತ್ಸವದ ಪರೇಡ್‌ ಆರಂಭವಾಯಿತು. ರಾಜಪಥ್‌ ಕರ್ತವ್ಯಪಥ ಎಂದು ಮರುನಾಮಕರಣಗೊಂಡ ಬಳಿಕ ನಡೆಯುತ್ತಿರುವ 3ನೇ ಗಣರಾಜ್ಯೋತ್ಸವ ಇದಾಗಿದ್ದು, ಪರೇಡ್‌ ಮೂಲಕ ವಿಶ್ವದ ಮುಂದೆ ದೇಶದ ಶಕ್ತಿ ಕರ್ತವ್ಯಪಥದಲ್ಲಿ ಮೊದಲ ಬಾರಿಗೆ ಅನಾವರಣಗೊಳಿಸಲಾಗುತ್ತಿದೆ.

ಈ ಬಾರಿಯ ಗಣರಾಜ್ಯೋತ್ಸವ ಜನ್ ಭಾಗಿದರಿ (ಜನರ ಭಾಗವಹಿಸುವಿಕೆ) ವಿಷಯದ ಮೇಲೆ ವಿಶೇಷ ಗಮನ ಹರಿಸಲಾಗಿದೆ. ಸಾವಿರಾರು ಜನಸಾಮಾನ್ಯರು ವಿಶೇಷ ಅತಿಥಿಗಳಾಗಿ ಆಗಮಿಸಿದ್ದು, 10 ಸಾವಿರಕ್ಕೂ ಹೆಚ್ಚು ಜನರು ಭಾಗಿಯಾಗಿದ್ದಾರೆ.

- Advertisement -

Related news

error: Content is protected !!