

ವಿಟ್ಲ: ವಿಟ್ಲ ಭಗವಾನ್ ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿಗೆ ಶ್ರೀಧಾಮ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಭೇಟಿ ನೀಡಿ ಜೀರ್ಣೋದ್ದಾರ ಕಾರ್ಯಗಳನ್ನು ವೀಕ್ಷಿಸಿದರು.

ವಿಟ್ಲ ಭಗವಾನ್ ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರ ಮತ್ತು ಪಂಚಕಲ್ಯಾಣ ಮಹೋತ್ಸವ ಸಮಿತಿ ಅಧ್ಯಕ್ಷ ಜಿತೇಶ್ ಎಂ., ಕಾರ್ಯದರ್ಶಿ ದರ್ಶನ್ ಜೈನ್‌ರವರು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಪಂಚಕಲ್ಯಾಣ ಸಮಿತಿಯ ಗೌರವ ಸಲಹೆಗಾರ ಜಿನಚಂದ್ರ ಶೆಟ್ಟಿ ಕೇಪು, ಶ್ರೀಮಂದರ್ ಜೈನ್ ವಿಟ್ಲ, ಬಸದಿಯ ಅರ್ಚಕರಾದ ಕೀರ್ತಿ ಕುಮಾರ್ ಇಂದ್ರ ಮೊದಲಾದವರು ಉಪಸ್ಥಿತರಿದ್ದರು.
ಫೆ. 13 ರಿಂದ ಫೆ. 17 ರವರೆಗೆ ವಿಟ್ಲ ಭ। ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿ ತೀರ್ಥಂಕರರ ಮತ್ತು ಭ॥ ೧೦೦೮ ಶ್ರೀ ಮಹಾವೀರ ತೀರ್ಥಂಕರರ ಪಂಚಕಲ್ಯಾಣ ಮಹೋತ್ಸವ ಮತ್ತು ನೂತನ ಬಿಂಬ ಪ್ರತಿಷ್ಠೆ ಹಾಗೂ ಶ್ರೀ ಯಕ್ಷಿ ಪದ್ಮಾವತಿ ಅಮ್ಮನವರ ಮತ್ತು ಶ್ರೀ ಯಕ್ಷಿ ಜ್ವಾಲಾಮಾಲಿನಿ ಅಮ್ಮನವರ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನಲೆ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಜೀರ್ಣೋದ್ಧಾರ ಕೆಲಸ ಕಾರ್ಯಗಳು ಭರದಿಂದ ಸಾಗುತ್ತಿದೆ.