Sunday, June 29, 2025
spot_imgspot_img
spot_imgspot_img

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌‌..!

- Advertisement -
- Advertisement -

ಮಂಗಳೂರು: ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ.

ಬಂಧಿತ ಆರೋಪಿಯನ್ನು ಹಾಸನ ಜಿಲ್ಲೆಯ ಸಕಲೇಶಪುರದ ಬಾಳುಪೇಟೆ ನಿವಾಸಿ ಕಿಶೋರ್ ಶೆಟ್ಟಿ ಎಂದು ಗುರುತಿಸಲಾಗಿದೆ.

ಆರೋಪಿಯು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರಿಂದ ನ್ಯಾಯಾಲಯವು ಈ ಪ್ರಕರಣವನ್ನು LPC ಪ್ರಕರಣವೆಂದು ಪರಿಗಣಿಸಿತ್ತು. ಅದರಂತೆ ಆರೋಪಿಯ ಪತ್ತೆಗಾಗಿ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಎಎಸ್ಸೈ ಗಂಗಾಧರ ಎನ್, ಎಚ್.ಸಿ ಚಂದ್ರಹಾಸ್ ಸನೀಲ್, ಎಚ್‌ಸಿ ಪುರುಷೊತ್ತಮ ಅವರನ್ನು ಒಳಗೊಂಡ ತಂಡವು ಕಾರ್ಯಾಚರಣೆ ನಡೆಸಿ ಬುಧವಾರ ಸಕಲೇಶಪುರದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

- Advertisement -

Related news

error: Content is protected !!