Saturday, June 28, 2025
spot_imgspot_img
spot_imgspot_img

ಶಾಲೆಯೊಂದರ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ; 10 ಮಂದಿ ಸಾವು, ಐವರಿಗೆ ಗಾಯ..!

- Advertisement -
- Advertisement -

ಸ್ವೀಡನ್​: ಶಾಲೆಯೊಂದರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, 10 ಮಂದಿ ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ.ದಾಳಿ ನಡೆಸಿದವರು ಯಾರೆಂಬುದು ಇನ್ನೂ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ರಾಜಧಾನಿ ಸ್ಟಾಕ್‌ಹೋಮ್‌ನಿಂದ ಪಶ್ಚಿಮಕ್ಕೆ 200 ಕಿಮೀ ದೂರದಲ್ಲಿರುವ ಶಾಲೆಯಲ್ಲಿ ಈ ಘಟನೆ ನಡೆದಿದೆ.

ಸುದ್ದಿ ಸಂಸ್ಥೆ ರಾಯ್ಟರ್ಸ್​ ಪ್ರಕಾರ, ಕೇಂದ್ರ ಒರೆಬ್ರೊ ನಗರದ ಶಾಲೆಯ ಮೇಲೆ ದಾಳಿ ನಡೆಸಿದೆ. ದಾಳಿಕೋರ ಮನಬಂದಂತೆ ಗುಂಡು ಹಾರಿಸಿದ್ದಾನೆ. ಸ್ವೀಡನ್​ನಲ್ಲಿ ಈ ನಗರವನ್ನು ಸುರಕ್ಷಿತ ನಗರವೆಂದೇ ಪರಿಗಣಿಸಲಾಗಿತ್ತು. ಗುಂಡಿನ ದಾಳಿಯಿಂದ ಜನರು ಅತಂಕಗೊಂಡಿದ್ದಾರೆ.

ಗುಂಡಿನ ದಾಳಿಯ ನಂತರ ಶಾಲೆಯಲ್ಲಿ ಭದ್ರತೆಯನ್ನು ಪೊಲೀಸರು ಇತರೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಸ್ಥಳೀಯರು ಹತ್ತಿರ ಹೋಗದಂತೆ ಮನವಿ ಮಾಡಲಾಗಿದೆ. ಅಲ್ಲದೆ ತನಿಖೆ, ಭದ್ರತೆಗೆ ಸಂಬಂಧಿಸಿದ ಕೆಲಸದಲ್ಲಿ ಹಸ್ತಕ್ಷೇಪ ಮಾಡಬೇಡಿ ಎಂದು ಕೂಡ ಹೇಳಿದ್ದಾರೆ.

ಸ್ವೀಡನ್‌ ಇತಿಹಾಸದಲ್ಲಿ ನಡೆದ ಅತ್ಯಂತ ಕೆಟ್ಟ ಸಾಮೂಹಿಕ ಗುಂಡಿನ ದಾಳಿ ಎಂದು ಪ್ರಧಾನಿ ಉಲ್ಫ್​ ಕ್ರಿಸ್ಟಿರ್ಸನ್ ಹೇಳಿದ್ದಾರೆ. ದಾಳಿ ಕೋರ ಕೂಡ ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ, ಆದರೆ ಅವನಿಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಇದ್ದಂತೆ ಕಾಣುತ್ತಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಹಲವು ಜನರು ಗಾಯಗೊಂಡಿದ್ದರಿಂದ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

- Advertisement -

Related news

error: Content is protected !!