Sunday, June 7, 2026
spot_imgspot_img
spot_imgspot_img

ಬಾಂಗ್ಲಾದಲ್ಲಿ ಮತ್ತೆ ಹಿಂಸಾಚಾರ: ಶೇಖ್ ಹಸೀನಾ ತಂದೆ ನಿವಾಸ ಧ್ವಂಸ…!

- Advertisement -
- Advertisement -

ಢಾಕಾ: ಬಾಂಗ್ಲಾದಲ್ಲಿ ಮತ್ತೆ ಹಿಂಸಾಚಾರದ ಮುಂದುವರಿದಿದೆ. ಭಾರತಕ್ಕೆ ಪಲಾಯನ ಮಾಡಿರುವ ಶೇಖ್ ಹಸೀನಾ ಮಾಡಿದ ಭಾಷಣದಿಂದ ಆಕ್ರೋಶಗೊಂಡ ವಿರೋಧಿ ಬಣ ರಾಜಧಾನಿ ಢಾಕಾದಲ್ಲಿ ನಡೆಸಿದ ಪ್ರತಿಭಟನೆ ಹಿಂಸಾರೂಪ ಪಡೆದಿದೆ.

ಶೇಖ್ ಹಸೀನಾ ತಂದೆ, ಬಾಂಗ್ಲಾದೇಶ ಸಂಸ್ಥಾಪಕ ಶೇಖ್ ಮುಜಿಬುರ್ ರೆಹಮಾನ್ ಸ್ಮಾರಕ ಮತ್ತು ಅವರ ನಿವಾಸವನ್ನು ಧ್ವಂಸಗೊಳಿಸಲಾಗಿದೆ. ಮನೆಗೆ ಬೆಂಕಿ ಹಚ್ಚಿ, ಜೆಸಿಬಿ, ಕ್ರೇನ್ ಮೂಲಕ ಮನೆ ಧ್ವಂಸಗೊಳಿಸಿದ್ದಾರೆ.

ನಾವು ಗಳಿಸಿದ ಸ್ವಾತಂತ್ರ‍್ಯವನ್ನು, ಲಕ್ಷಾಂತರ ಹುತಾತ್ಮರ ಪ್ರಾಣವನ್ನು ಬುಲ್ಡೋಜರ್ ಮೂಲಕ ನಾಶಗಳಿಸಲು ಸಾಧ್ಯವಿಲ್ಲವೆಂದು ಶೇಖ್ ಹಸೀನಾ ಭಾರತದಿಂದ ಆನ್‌ಲೈನ್ ಮೂಲಕ ಮಾಡಿದ ಭಾಷಣಕ್ಕೆ ಕೆರಳಿದ ಪ್ರತಿಭಟನಾಕಾರರು ಅವಾಮಿ ಲೀಗ್ ಪಕ್ಷ ನಿಷೇಧಕ್ಕೆ ಆಗ್ರಹಿಸಿ ದಂಗೆ ಎಬ್ಬಿಸಿದ್ದಾರೆ. ಇದು ಬಾಂಗ್ಲಾದೇಶದಲ್ಲಿ ಮತ್ತೊಮ್ಮೆ ಅಶಾಂತಿ ಹರಡುವ ಸಾಧ್ಯತೆ ಇದೆ.

ಶೇಖ್‌ ಹಸೀನಾ ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ಆನ್‌ಲೈನ್‌ ಮೂಲಕ ಭಾಷಣ ಮಾಡಿದರು. ನನ್ನ ತಂದೆ ನಾವು ನಿರ್ಮಾಣ ಕಟ್ಟಡಗಳನ್ನು ಕೆಡವಬಹುದು, ಆದ್ರೆ ಇತಿಹಾಸವನ್ನು ಕೆಡವಲು ಸಾಧ್ಯವಿಲ್ಲ. ಇಂದಲ್ಲ ನಾಳೆ ಅದು ತನ್ನ ಸೇಡು ತೀರಿಸಿಕೊಳ್ಳುತ್ತೆ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಎಚ್ಚರಿಸಿದರು.

- Advertisement -

Related news

error: Content is protected !!