Monday, October 26, 2026
spot_imgspot_img
spot_imgspot_img

ಭೀಕರ ರಸ್ತೆ ಅಪಘಾತ; ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದ 8 ಮಂದಿ ಬಲಿ

- Advertisement -
- Advertisement -

ಜೈಪುರ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದ ಕಾರು ಮತ್ತು ಜೋಧಪುರಕ್ಕೆ ಹೋಗುತ್ತಿದ್ದ ಬಸ್‌ ಡಿಕ್ಕಿ ಹೊಡೆದು ಕಾರಿನಲ್ಲಿದ್ದ 8 ಮಂದಿ ಮೃತಪಟ್ಟ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಜೈಪುರ-ಅಜ್ಮೀರ್‌ ಹೆದ್ದಾರಿಯ ದುಡು ಎಂಬಲ್ಲಿ ಅಪಘಾತ ನಡೆದಿದೆ.ಕಾರು ಭಿಲ್ವಾರದಿಂದ ಉತ್ತರ ಪ್ರದೇಶಕ್ಕೆ ತೆರಳುತ್ತಿದ್ದರೆ, ಬಸ್‌ ಜೈಪುರದಿಂದ ಜೋಧಪುರಕ್ಕೆ ಹೋಗುತ್ತಿತ್ತು. ಬಸ್‌ನಲ್ಲಿ 30ರಿಂದ 40 ಪ್ರಯಾಣಿಕರಿದ್ದರು. ಗುರುವಾರ (ಫೆ. 6) ಅಪರಾಹ್ನ 3.30ರ ವೇಳೆ ಈ ಅಪಘಾತ ನಡೆದಿದೆ ಎಂದು ಮೂಲಗಳು ತಿಳಿಸಿವೆ.ʼʼಗುರುವಾರ ಅಪರಾಹ್ನ 3.30ರ ವೇಳೆ ಅಪಘಾತ ನಡೆದಿದೆ.

ಟೈರ್‌ ಸ್ಫೋಟಗೊಂಡ ಕಾರಣ ನಿಯಂತ್ರಣ ಕಳೆದುಕೊಂಡ ಬಸ್‌ ಚಾಲಕ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆʼʼ ಎಂದು ಜೈಪುರ ರೂರಲ್‌ ಎಸ್‌ಪಿ ಆನಂದ್‌ ಶರ್ಮಾ ಮಾಹಿತಿ ನೀಡಿದ್ದಾರೆ. ಮೃತರನ್ನು ಭಿಲ್ವಾರದ ಕೊಟ್ರಿ ಪ್ರದೇಶದ ನಿವಾಸಿಗಳಾದ ದಿನೇಶ್ ರೇಗರ್, ಸುರೇಶ್ ರೇಗರ್, ರವಿಕಾಂತ್ ರೇಗರ್, ಬಾಬು ರೇಗರ್, ಬಬ್ಲು ಮೇವಾರ, ಕಿಶನ್ ಲಾಲ್, ನಾರಾಯಣ ಬೈರ್ವಾ ಮತ್ತು ಪ್ರಮೋದ್ ಸುತಾರ್ ಎಂದು ಗುರುತಿಸಲಾಗಿದೆ.

- Advertisement -

Related news

error: Content is protected !!