Sunday, September 13, 2026
spot_imgspot_img
spot_imgspot_img

ಟಿಪ್ಪರ್ ಹರಿದು ಬಾಲಕ ಮೃತ್ಯು

- Advertisement -
- Advertisement -

ಗದಗ: ಗದಗ ತಾಲೂಕಿನ ಹರ್ತಿ ಗ್ರಾಮದಲ್ಲಿ ಟಿಪ್ಪರ್ ಹರಿದು ಆರು ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಮೃತ ಬಾಲಕ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಹಿಂಡಸಗೇರಿ ಗ್ರಾಮದ ಪ್ರೀತಮ್ ಹರಿಜನ (6) ಎಂದು ತಿಳಿದು ಬಂದಿದೆ.ಹರ್ತಿ ಗ್ರಾಮದ ಬಸ್ ನಿಲ್ದಾಣದ ಮುಂದೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.ಬಾಲಕ ಪ್ರೀತಮ್ ತಾಯಿಯೊಂದಿಗೆ ಯತ್ನಳ್ಳಿ ಗ್ರಾಮಕ್ಕೆ ಆಗಮಿಸಿದ್ದರು ಎನ್ನಲಾಗಿದೆ. ಬಸ್ ನಿಲ್ದಾಣದ ಬಳಿ ವೇಗವಾಗಿ ಬಂದ ಟಿಪ್ಪರ್ ಬಾಲಕನಿಗೆ ಡಿಕ್ಕಿಯಾಗಿ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.ಈ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

- Advertisement -

Related news

error: Content is protected !!