Tuesday, July 1, 2025
spot_imgspot_img
spot_imgspot_img

ಉಡುಪಿ: ಕೊಲೆ ಪ್ರಕರಣ; ಮೂವರು ಆರೋಪಿಗಳ ಬಂಧನ..!

- Advertisement -
- Advertisement -

ಉಡುಪಿ: ಒಂದೂವರೆ ವರ್ಷಗಳ ಹಿಂದೆ ಕರಾವಳಿ ಜಂಕ್ಷನ್ ಬಳಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಕೊಪ್ಪಳ ಜಿಲ್ಲೆ ಬಿಳಕಲ್ ಕುಷ್ಟಗಿ ನಿವಾಸಿಗಳಾದ ಕನಕಪ್ಪ ಹನುಮಂತ ರೋಡಿ(46), ಯಮನೂರ ತಿಪ್ಪಣ್ಣ ಮಾರಣ ಬಸರಿ (24), ಯಮನೂರಪ್ಪ ಜೇಡಿ ಯಾನೆ ರೊಡ್ಡ ಯಮನೂರಪ್ಪ (26) ಎಂದು ಗುರುತಿಸಲಾಗಿದೆ.

2023 ರ ಅ.16 ರಿಂದ ಅ.17ರ ಬೆಳಿಗ್ಗೆ8.30ರ ಮಧ್ಯಾವಧಿಯಲ್ಲಿ ಕರಾವಳಿ ಜಂಕ್ಷನ್ ಬಳಿ ಕಿತ್ತೂರ ಸಿದ್ದಪ್ಪ ಶಿವನಪ್ಪ ಹುಬ್ಬಳ್ಳಿ ಅವರನ್ನು ಯಾರೋ ಅಪರಿಚಿತರು ಆಯುಧದಿಂದ ಬಲ ಕೈಯನ್ನು ಕಡಿದು ಕೊಲೆ ಮಾಡಿದ್ದರು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕಳೆದು ಹೋದ ಒಂದು ಬಟ್ಟೆ ವಿಚಾರದಲ್ಲಿ ಮೃತ ಕಿತ್ತೂರ ಸಿದ್ದಪ್ಪ ಶಿವನಪ್ಪನು 2ನೇ ಆರೋಪಿ ಯಮನೂರ ತಿಪ್ಪಣ್ಣ ಮಾರಣ ಬಸರಿಯ ಸ್ನೇಹಿತ ಚಿನ್ನು ಪಾಟೇಲ್ ಹುಬ್ಬಳ್ಳಿ ಅವರಿಗೆ ರಾತ್ರಿ 12 ಗಂಟೆ ಸಮಯದಲ್ಲಿ ಹಲ್ಲೆ ಮಾಡಿದ್ದ. ಈ ಬಗ್ಗೆ ಪ್ರಶ್ನಿಸಲು ಹೋದ 2ನೇ ಆರೋಪಿಗೆ ಕಿತ್ತೂರ ಸಿದ್ದಪ್ಪ ಹಲ್ಲೆ ಮಾಡಿದ್ದ. ಹಲ್ಲೆ ಮಾಡಿದ ದ್ವೇಷದಿಂದ ಮರುದಿನ ಬೆಳಗ್ಗೆ ಆರೋಪಿಗಳಾದ ಯಮನೂರ ತಿಪ್ಪಣ್ಣ ಮಾರಣ ಬಸರಿ, ಕನಕಪ್ಪ, ಯಮನೂರಪ್ಪ ಜೇಡಿ ಮೂವರು ಸೇರಿ ಸಿದ್ದಪ್ಪನನ್ನು ಕೊಲೆ ಮಾಡುವ ಉದ್ದೇಶದಿಂದ ಹಲ್ಲೆ ಮಾಡಿದ್ದರು. ಯಮನೂರ ತಿಪ್ಪಣ್ಣನು ಕೊಡಲಿಯಿಂದ ಹಲ್ಲೆ ಮಾಡಿದ್ದು, ಇದರಿಂದ ಸಿದ್ದಪ್ಪ ಮೃತಪಟ್ಟಿದ್ದ. ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

- Advertisement -

Related news

error: Content is protected !!