Wednesday, August 12, 2026
spot_imgspot_img
spot_imgspot_img

ಬೈಕ್‌ಗೆ ಡಿಕ್ಕಿ ಹೊಡೆದ ಕಾರು; ಬಾಲಕ ಸಾವು, ತಂದೆ ಗಂಭೀರ..!

- Advertisement -
- Advertisement -

ರಾಮನಗರ: ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸಾವನ್ನಪ್ಪಿದ್ದು, ತಂದೆ ಗಂಭೀರ ಗಾಯಗೊಂಡಿರುವ ಘಟನೆ ಹಾರೋಹಳ್ಳಿ ತಾಲೂಕಿನ ಎಸ್ ಪಾಳ್ಯದ ಮಯ್ಯಾಸ್ ಫ್ಯಾಕ್ಟರಿ ಬಳಿ ನಡೆದಿದೆ.

ಮೃತಪಟ್ಟ ಬಾಲಕ ರಾಮನಗರ ತಾಲೂಕಿನ ಬಿಡದಿ ಹೋಬಳಿಯ ಸಿದ್ದಯ್ಯನದೊಡ್ಡಿ ಗ್ರಾಮದ ನಿವಾಸಿ ಚಿರಂತ್ ಗೌಡ (12) ಎಂದು ಗುರುತಿಸಲಾಗಿದೆ.

ಸುರೇಶ್ ಗುರುವಾರ ರಾತ್ರಿ ಮಗನನ್ನು ಅಜ್ಜಿ ಮನೆಗೆ ಬಿಡಲು ಬೈಕ್‌ನಲ್ಲಿ ಹೋಗುತಿದ್ದ ವೇಳೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸುರೇಶ್‌ಗೆ ಗಂಭೀರ ಗಾಯಗಳಾಗಿವೆ. ಸುರೇಶ್ ದಯಾನಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!