Friday, June 19, 2026
spot_imgspot_img
spot_imgspot_img

ಮುಂಬೈ ಭಯೋತ್ಪಾದನಾ ದಾಳಿಯ ಆರೋಪಿ ಭಾರತಕ್ಕೆ ಹಸ್ತಾಂತರಿಸಲು ಒಪ್ಪಿಗೆ- ಟ್ರಂಪ್ ಘೋಷಣೆ

- Advertisement -
- Advertisement -

ವಾಷಿಂಗ್ಟನ್‌: 2008ರ ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್‌ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೇರಿಕ ಒಪ್ಪಿಗೆ ಕೊಟ್ಟಿದೆ. ಪ್ರಧಾನಿ ಮೋದಿ ಸಮ್ಮುಖದಲ್ಲೇ ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆ ಮಾಡಿದ್ದಾರೆ.

ಪ್ರಧಾನಿ ಮೋದಿ ಅವರು ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. 2ನೇ ಬಾರಿಗೆ ಅಮೆರಿಕ ಅಧ್ಯಕ್ಷರಾಗಿ ಟ್ರಂಪ್‌ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಭೇಟಿಯನ್ನು ಪ್ರಧಾನಿ ಮೋದಿ ಮಾಡಿದ್ದಾರೆ.

ಪ್ರಧಾನಿ ಮೋದಿ ಅವರ ಜೊತೆ ದ್ವಿಪಕ್ಷೀಯ ಮಾತುಕತೆ ನಂತರ ನಾವು 26/11 ಮುಂಬೈ ಭಯೋತ್ಪಾದಕ ದಾಳಿಯ ಆರೋಪಿಯಾಗಿರುವ ಅತ್ಯಂತ ಅಪಾಯಕಾರಿ ವ್ಯಕ್ತಿಯನ್ನು ಭಾರತಕ್ಕೆ ಹಸ್ತಾಂತರಿಸುತ್ತಿದ್ದೇವೆ ಎಂದು ಅಧ್ಯಕ್ಷ ಟ್ರಂಪ್ ಹೇಳಿದ್ದಾರೆ.

26/11 ಭಯೋತ್ಪಾದಕ ದಾಳಿಯ ಪ್ರಮುಖ ಆರೋಪಿ ಪ್ರಸ್ತುತ ಅಮೆರಿಕದಲ್ಲಿ ಹೆಚ್ಚಿನ ಭದ್ರತೆಯ ಜೈಲಿನಲ್ಲಿದ್ದಾನೆ. ಭಾರತ ಹಲವು ವರ್ಷಗಳಿಂದ ಆತನನ್ನು ಹಸ್ತಾಂತರಿಸುವಂತೆ ಕೋರುತ್ತಿದೆ.

- Advertisement -

Related news

error: Content is protected !!