




ವಿಟ್ಲ: ಅಪ್ರಾಪ್ತ ಬಾಲಕಿ ಮೇಲೆ ಅಂಗಡಿ ಮಾಲಿಕ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಆರೋಪಿ ಅಶ್ರಫ್ (40 ವರ್ಷ) ಎಂಬಾತನಿಗೆ 5 ವರ್ಷಗಳ ಸೆರೆವಾಸ ಮತ್ತು 30 ಸಾವಿರ ದಂಡ ವಿಧಿಸಿದ ಬಗ್ಗೆ ವರದಿಯಾಗಿದೆ. ಎ.ಎಮ್ ಸ್ಟೋರ್ ದಿನಸಿ ಅಂಗಡಿ ಮಾಲಿಕ ಆಶ್ರಫ್ ಎಂಬಾತನು ಅಂಗಡಿಗೆ ತೆರಳಿದ್ದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ಕೆಲ ತಿಂಗಳುಗಳ ಹಿಂದೆ ನಡೆದಿತ್ತು. ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳು ಆರೋಪಿ ಅಶ್ರಫ್ ನನ್ನು ಬಂಧಿಸುವಂತೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದರು. 40 ವರ್ಷ ಪ್ರಾಯದ ಅಶ್ರಫ್ ಹೆಣ್ಣು ಮಕ್ಕಳಿಗೆ ದೌರ್ಜನ್ಯ ನಡೆಸಿದ್ದ, ಆರೋಪಿ ಅಶ್ರಫ್ ನನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಗಳೂರು ವಿಚಾರಣೆ ನಡೆಸಿ ಆರೋಪಿ ಅಶ್ರಫ್ ಎಂಬಾತನಿಗೆ ನ್ಯಾಯಾಲಯವು ಭಾರತೀಯ ನ್ಯಾಯ ಸಂಹಿತ ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (POSCO) ಕಾಯ್ದೆಯನ್ವಯ 5 ವರ್ಷಗಳ ಸೆರೆವಾಸ ಮತ್ತು 30 ಸಾವಿರ ದಂಡ ವಿಧಿಸಲಾಗಿದೆ.