Saturday, July 5, 2025
spot_imgspot_img
spot_imgspot_img

ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ

- Advertisement -
- Advertisement -

ನವದೆಹಲಿ: ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಸೋಮವಾರ ನೂತನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ ಎಂದು ಕಾನೂನು ಸಚಿವಾಲಯ ತಿಳಿಸಿದೆ.

ಕಳೆದ ವರ್ಷದ ಮಾರ್ಚ್‌ನಲ್ಲಿ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕಗೊಂಡಿದ್ದರು. ಇದೀಗ ಚುನಾವಣಾ ಆಯೋಗದ ಸದಸ್ಯರ ನೇಮಕಾತಿಯ ಹೊಸ ಕಾನೂನಿನಡಿಯಲ್ಲಿ ಮೊದಲ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕಗೊಂಡಿದ್ದಾರೆ. ಅವರು ನಿರ್ಗಮಿತ ಆಯುಕ್ತ ರಾಜೀವ್ ಕುಮಾರ್ ಅವರ ಸ್ಥಾನವನ್ನು ತುಂಬಲಿದ್ದಾರೆ.

26 ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕಗೊಂಡಿರುತ್ತಾರೆ. ಜ್ಞಾನೇಶ್ ಕುಮಾರ್ ಅವರ ಅಧಿಕಾರಾವಧಿ 2029ರ ಜನವರಿ 26 ರವರೆಗೆ ಇರಲಿದೆ. ಜ್ಞಾನೇಶ್ ಕುಮಾರ್ ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗಳು ಮತ್ತು 2026 ರಲ್ಲಿ ನಡೆಯಲಿರುವ ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗಳ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.

- Advertisement -

Related news

error: Content is protected !!