Saturday, June 28, 2025
spot_imgspot_img
spot_imgspot_img

ಲ್ಯಾಂಡಿಂಗ್‌ ವೇಳೆ ರನ್‌ ವೇಯಲ್ಲಿ ಪಲ್ಟಿಯಾಗಿ ಹೊತ್ತಿ ಉರಿದ ವಿಮಾನ; 18 ಜನರಿಗೆ ಗಾಯ..!

- Advertisement -
- Advertisement -

ಟೊರೊಂಟೋ: ಲ್ಯಾಂಡ್‌ ಆಗಿ ರನ್‌ ವೇಯಲ್ಲಿ ಸಾಗುವಾಗ ವಿಮಾನ ಪಲ್ಟಿಯಾಗಿ ಹೊತ್ತಿ ಉರಿದ ಘಟನೆ ಕೆನಡಾದ ರಾಜಧಾನಿ ಟೊರೊಂಟೋದಲ್ಲಿ ನಡೆದಿದೆ.

80 ಜನರನ್ನು ಹೊತ್ತಿದ್ದ ಡೆಲ್ಟಾ ಏರ್ ಲೈನ್ಸ್ ವಿಮಾನ ಲ್ಯಾಂಡ್‌ ಆಗಿ ರನ್‌ವೇಯಲ್ಲಿ ಮುಂದಕ್ಕೆ ಬರುತ್ತಿತ್ತು. ಈ ವೇಳೆ ಅವಘಡ ಸಂಭವಿಸಿದೆ. ವಿಮಾನ ದುರಂತದಲ್ಲಿ ಕನಿಷ್ಠ 18 ಜನರಿಗೆ ಗಾಯಗಳಾಗಿವೆ. ಇದರಲ್ಲಿ ಒಂದು ಮಗು ಸೇರಿದಂತೆ, ಓರ್ವ ವ್ಯಕ್ತಿ ಹಾಗೂ ಮಹಿಳೆಯೊಬ್ಬರ ಸ್ಥಿತಿ ಗಂಭೀರವಾಗಿದೆ. ಘಟನೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ. ವಿಮಾನ ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ

76 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿ ಇದ್ದ ವಿಮಾನ ಅಮೆರಿಕದ ಮಿನ್ನೇಸೋಟದ ಮಿನ್ನಿಯಾಪೋಲಿಸ್‌ನಿಂದ ಕೆನಡಾದ ಅತಿದೊಡ್ಡ ಮಹಾನಗರ ಟೊರೊಂಟೊಕ್ಕೆ ಬಂದಿತ್ತು ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

ವಿಮಾನ ಪಲ್ಟಿಯಾಗುತ್ತಿದ್ದಂತೆ ನಿಲ್ದಾಣದಲ್ಲಿದ್ದ ಸಿಬ್ಬಂದಿ ಕೂಡಲೇ ಬೆಂಕಿ ನಂದಿಸಿ, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಬಳಿಕ ಗಾಯಗಳುಗಳನ್ನು ಹೆಲಿಕಾಪ್ಟರ್ ಮೂಲಕ ಆಸ್ಪತ್ರೆಗಳಿಗೆ ಕರೆದೊಯ್ಯಲಾಯಿತು. ಘಟನೆಯ ನಂತರ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿತ್ತು. ಸುಮಾರು ಎರಡು ಗಂಟೆಗಳ ಬಳಿಕ ವಿಮಾನ ನಿಲ್ದಾಣದಿಂದ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Related news

error: Content is protected !!