Tuesday, July 28, 2026
spot_imgspot_img
spot_imgspot_img

ದ್ವಿಚಕ್ರ ವಾಹನ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಮಹಿಳೆ ಸಾವು

- Advertisement -
- Advertisement -

ಉಪ್ಪಿನಂಗಡಿ: ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದ ವೇಳೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಬಿ.ಸಿ.ರೋಡಿನಲ್ಲಿ ನಡೆದಿದೆ.

ಉಪ್ಪಿನಂಗಡಿ ನಟ್ಟಿಬೈಲು ನಿವಾಸಿ ಕೆ.ಸದಾರಾಮ ಎಂಬವರ ಪತ್ನಿ ಸರಸ್ವತಿ (50) ಮೃತಪಟ್ಟವರು.ಸೋಮವಾರ ಬೆಳಗ್ಗೆ ಎಲೈಸಿ ಕಚೇರಿಯಲ್ಲಿ ಕೆಲಸ ಮುಗಿಸಿ, ಉಪ್ಪಿನಂಗಡಿಗೆ ತೆರಳಲು ರಸ್ತೆ ದಾಟುತ್ತಿದ್ದ ವೇಳೆ ಸ್ಕೂಟರ್ ಡಿಕ್ಕಿ ಹೊಡೆದಿದೆ. ಈ ವೇಳೆ ತಲೆಯ ಭಾಗಕ್ಕೆ ಗಾಯಗಳಾಗಿದ್ದು, ಕೂಡಲೇ ಅವರನ್ನು ಸಮೀಪದ ತುಂಬೆಯಲ್ಲಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಲ್ಲಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು.

- Advertisement -

Related news

error: Content is protected !!