Tuesday, June 23, 2026
spot_imgspot_img
spot_imgspot_img

ವಿಟ್ಲ: ಮಾಡತ್ತಡ್ಕ ಭಾರೀ ಸ್ಫೋಟಕ ಸದ್ದು: ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು

- Advertisement -
- Advertisement -

ವಿಟ್ಲ: ಬಂಟ್ವಾಳ ತಾಲೂಕು ವಿಟ್ಲ ಮುಡ್ನೂರು ಗ್ರಾಮದ ಮಾಡತ್ತಡ್ಕ ಎಂಬಲ್ಲಿ ಮಾ.4 ರಂದು ಮಧ್ಯಾಹ್ನ ಎನ್‌.ಎಸ್‌ ಕೋರೆಯ ಗಣಿಗಾರಿಕೆಗಾಗಿ ಬೇಕಾಗಿರುವ ಅಪಾಯಕಾರಿಯಾದ ಸ್ಪೋಟಕಗಳನ್ನು ಬಂಟ್ವಾಳದ ಶ್ರೀ ರಾಮ್‌ ಕನ್‌ಸ್ಟ್ಟ್ರಕ್ಷನ್‌ ನ ಅಶೋಕ ಮತ್ತು ಅದರ ಬ್ಲಾಸ್ಟರ್‌ ಕೆಲಸ ಮಾಡುತ್ತಿದ್ದಾತ, ಬಂಟ್ವಾಳ ತಾಲೂಕು ವಿಟ್ಲ ಮುಡ್ನೂರು ಗ್ರಾಮದ ಮಾಡತ್ತಡ್ಕ ಎಂಬಲ್ಲಿರುವ ಎನ್‌ ಎಸ್‌ ಕೋರೆಯ ಬಳಿಯಿರುವ ಮೋನಪ್ಪ ಪೂಜಾರಿರವರ ಬಾಬ್ತು ಜಾಗದಲ್ಲಿರುವ ಕಲ್ಲು ಬಂಡೆಗಳ ಮೇಲೆ ಯಾವುದೇ ಮುಂಜಾಗ್ರತಾ ಕ್ರಮ ಹಾಗೂ ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯತನದಿಂದ ಮತ್ತು ಬೇಜವಾಬ್ದಾರಿಯಿಂದ ಇಟ್ಟಿದ್ದು, ಸ್ಪೋಟಕಗಳು ಬಿಸಿಲಿನ ತಾಪದಿಂದ ಸ್ಪೋಟಗೊಂಡು ಸುತ್ತಮುತ್ತಲಿನ ಮರಗಿಡಗಳು ಛಿದ್ರಗೊಂಡಿರುತ್ತದೆ ಹಾಗೂ ಪರಿಸರದ ಈಶ್ವರ ನಾಯ್ಕ ಮತ್ತು ವಸಂತ ಮೋಹನ ಎಂಬವರುಗಳ ಮನೆಗಳಿಗೆ ಹಾನಿಯಾಗಿದ್ದು, ಯಾವುದೇ ಪ್ರಾಣ ಹಾನಿಗಳು ಸಂಭವಿಸಿರುವುದಿಲ್ಲ.ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 36/2025 ಕಲಂ: 9B Explossive Act 1884 ಮತ್ತು 288 BNS 2023 ರಂತೆ ಪ್ರಕರಣ ದಾಖಲಾಗಿರುತ್ತದೆ.

- Advertisement -

Related news

error: Content is protected !!