- Advertisement -
- Advertisement -



ಮಂಗಳೂರು: ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿನ ಕೈದಿಗಳು ಫುಡ್‌ಪಾಯಿಸನ್‌ನಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ವರದಿಯಾಗಿದೆ. ಮಧ್ಯಾಹ್ನ ಆಹಾರ ಸೇವಿಸಿದ ಕೆಲ ಸಮಯದ ಬಳಿಕ ಕೈದಿಗಳು ವಾಂತಿ ಮಾಡಲು ಆರಂಭಿಸಿದ್ದಾರೆ. ಇನ್ನೂ ಕೆಲವರು ವಾಂತಿಭೇದಿಯಿಂದ ತಲೆ ಸುತ್ತಿ ಬಿದ್ದು, ಅಸ್ವಸ್ಥಗೊಂಡಿದ್ದಾರೆ.
ಕೈದಿಗಳ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡ ತಕ್ಷಣ ಜೈಲಿನ ಅಧಿಕಾರಿಗಳು ಭದ್ರತೆಯೊಂದಿಗೆ ಅನಾರೋಗ್ಯಕ್ಕೆ ಒಳಗಾದವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಫುಡ್ ಪಾಯ್ಸನ್ ಆಗಲು ನಿಖರ ಕಾರಣ ತಿಳಿದುಬಂದಿಲ್ಲ. ನೀರು ಅಥವಾ ಸೇವಿಸಿದ ಆಹಾರದಲ್ಲಿ ವಿಷ ಪದಾರ್ಥ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಆಸ್ಪತ್ರೆಗೆ ದಾಖಲಾಗಿರುವ ಕೆಲ ಕೈದಿಗಳು ತೀವ್ರ ಅಸ್ವಸ್ಥರಾಗಿದ್ದು, ಇನ್ನೂ ಕೆಲವರು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.
- Advertisement -