- Advertisement -
- Advertisement -
‘ಪುತ್ತೂರಿನಲ್ಲಿ ಮೆಡಿಕಲ್ ಸ್ಥಾಪನೆ ಉದ್ದೇಶ- ತಾಲೂಕು ಆಸ್ಪತ್ರೆ ಉನ್ನತೀಕರಣಕ್ಕೆ ಕ್ರಮ’ – ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ



ಪುತ್ತೂರಿನ ಹಲವು ದಶಕಗಳ ಬೇಡಿಕೆಯಾದ ಸರಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಯ ಕನಸ್ಸು ಕೊನೆಗೂ ಈಡೇರಿದೆ. ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾ.7ರಂದು ರಾಜ್ಯ ಬಜೆಟ್ ಮಂಡನೆಯಲ್ಲಿ ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರು ಮಾಡಿದ್ದಾರೆ.
ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆಯನ್ನು ಉನ್ನತೀಕರಿಸಿ ಪ್ರಸಕ್ತ ವರ್ಷದಲ್ಲಿ ಕ್ರಮ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ತಿಳಿಸಿದ್ದಾರೆ.
- Advertisement -








