Saturday, July 25, 2026
spot_imgspot_img
spot_imgspot_img

ಬಸ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ

- Advertisement -
- Advertisement -

ಬೆಂಗಳೂರು: ಕೆಎಸ್‌ಆರ್‌ಟಿಸಿ ಬೆಳಗಾವಿ ಡಿಪೋ 1ರ ಮೆಕಾನಿಕ್ ಬಸ್‌ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ.

ಮೆಕಾನಿಕ್ ಕೇಶವ ಕಮಡೊಳಿ (57) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಕೇಶವ ಕಮಡೊಳಿ ಬೆಳಗಾವಿಯ ಹಳೇ ಗಾಂಧಿನಗರದ ನಿವಾಸಿಯಾಗಿದ್ದು, ಕೆಎಸ್‌ಆರ್‌ಟಿಸಿ ಬಸ್‌ ವಾಶಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಕೇಶವ್ ಅವರಿಗೆ ಬೆನ್ನು ನೋವಿದ್ದರೂ ಅಧಿಕಾರಿಗಳು ಪಂಚರ್ ಕೆಲಸಕ್ಕೆ ಬದಲಾಯಿದ್ದರು ಎನ್ನಲಾಗಿದೆ.ಕೇಶವ ಅವರ ಡ್ಯೂಟಿ ಬದಲಿಸದಂತೆ ಡಿಪೋ ಮ್ಯಾನೇಜ‌ರ್ ಲಿಂಗರಾಜ ಲಾಠಿ ಅವರು ಸಹಾಯಕ ಕಾರ್ಯ ಅಧೀಕ್ಷಕ ಅನಿಲ್ ಬಾಂದೇಕರ್ ಅವರಿಗೆ ಮನವಿ ಮಾಡಿದ್ದರು. ಆದರೂ, ಕೂಡ ಡ್ಯೂಟಿ ಬದಲಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಡ್ಯೂಟಿ ಬದಲಿಸಿದ್ದಕ್ಕೆ ಮತ್ತು ಕೆಲಸದ ಒತ್ತಡ ತಡೆದುಕೊಳ್ಳಲು ಆಗದೆ ಕೇಶವ ಕಮಡೊಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ವಿಚಾರ ತಿಳಿದು ಸ್ಥಳಕ್ಕೆ ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಧಿಕಾರಿಗಳ ವಿರುದ್ಧ ಮೃತ ಕೇಶವ ಕುಟುಂಬಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಶವರನ್ನು ಮಾನಸಿಕ ಅಸ್ವಸ್ಥ ಎಂದ ಅಧಿಕಾರಿಗಳನ್ನು ಕುಟುಂಬಸ್ಥರು ತರಾಟೆ ತೆಗೆದುಕೊಂಡಿದ್ದಾರೆ. ಯಾವ ಆಧಾರದಲ್ಲಿ ಮಾನಸಿಕ ಅಸ್ವಸ್ಥ ಎಂದು ಹೇಳುತ್ತಿದ್ದೀರಿ? ಹುಷಾರಿಲ್ಲ ಡ್ಯೂಟಿ ಬದಲಿಸಬೇಡಿ ಎಂದು ಮನವಿ ಮಾಡಿದ್ವಿ. ಆದರೆ, ಈಗಮಾನಸಿಕ ಅಸ್ವಸ್ಥ ಅಂತ ಸುಳ್ಳು ಹೇಳಿದ್ದೀರಿ. ನ್ಯಾಯ ಸಿಗುವವರೆಗೂ ಶವ ತೆಗೆದುಕೊಂಡು ಹೋಗುವುದಿಲ್ಲ ಎಂದು ಕಿಡಿಕಾರಿದ್ದಾರೆ.

- Advertisement -

Related news

error: Content is protected !!