Thursday, July 23, 2026
spot_imgspot_img
spot_imgspot_img

ಸ್ಕೂಟರ್ – ಕಾರು ಡಿಕ್ಕಿ ; ಶಿಕ್ಷಕಿ ಮೃತ್ಯು

- Advertisement -
- Advertisement -

ಮೂಡಬಿದ್ರೆ : ಕಾರೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಚಾಲಕಿ ಶಿಕ್ಷಕಿ ಸಾವನಪ್ಪಿದ ಘಟನೆ ಮೂಡುಬಿದ್ರಿ ರಾಜ್ಯ ಹೆದ್ದಾರಿಯ ಶಿರ್ತಾಡಿ ಸೇತುವೆ ಬಳಿ ಘಟನೆ ನಡೆದಿದೆ.ಮೃತರನ್ನು ಮೂಡುಬಿದ್ರಿ ನಾಗರಕಟ್ಟೆಯ ನಿವಾಸಿಯಾಗಿದ್ದು, ಶಿರ್ತಾಡಿ ಹೋಲಿ ಏಂಜಲ್ಸ್ ಖಾಸಗಿ ಶಾಲೆಯ ಶಿಕ್ಷಕಿಯಾಗಿದ್ದ ಸುಜಯ ಭಂಡಾರಿ (35) ಎನ್ನಲಾಗಿದೆ.

ಶುಕ್ರವಾರ ಸಂಜೆ ವೇಳೆಗೆ ತನ್ನ ಕರ್ತವ್ಯ ಮುಗಿಸಿ ಮೂಡಬಿದ್ರೆ ನಾಗರಕಟ್ಟೆಯಲ್ಲಿರುವ ಮನೆಗೆ ಆಕ್ಟಿವದಲ್ಲಿ ಹೋಗುತ್ತಿದ್ದರು. ಶಿರ್ತಾಡಿ ಸೇತುವೆ ಬಳಿ ಎದುರುಗಡೆಯಿಂದ ಅತೀ ವೇಗವಾಗಿ ಬಂದ ಕಾರು ಏಕಾಏಕಿಯಾಗಿ ಆಕ್ಟಿವಾದಲ್ಲಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ದೂರಕ್ಕೆ ತಳ್ಳಲ್ಪಟ್ಟಿದ್ದರಿಂದ ಶಿಕ್ಷಕಿ ಗಂಭೀರವಾಗಿ ಗಾಯಗೊಂಡಿದ್ದರು.ತಲೆಭಾಗಕ್ಕೆ ತೀವ್ರ ಗಾಯಗೊಂಡಿದ್ದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆ ಮೃತಪಟ್ಟಿದ್ದಾರೆ. ಮೃತ ಶಿಕ್ಷಕಿಯ ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಅವರಿಗಿಬ್ಬ ಅವಳಿಜವಳಿ ಮಕ್ಕಳು ಮೂಡುಬಿದಿರೆ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!