Sunday, June 21, 2026
spot_imgspot_img
spot_imgspot_img

ನಿಗೂಢವಾಗಿ ನಾಪತ್ತೆಯಾಗಿದ್ದ ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್‌ ಉಡುಪಿಯಲ್ಲಿ ಜೀವಂತ ಪತ್ತೆ

- Advertisement -
- Advertisement -

ದ.ಕ ಜಿಲ್ಲಾ ಪೊಲೀಸರ ಯಶಸ್ವಿ ಪ್ರಯತ್ನ

ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಪರಂಗಿಪೇಟೆ ದಿಗಂತ್ ನಾಪತ್ತೆ ಪ್ರಕರಣಕ್ಕೆ ಸುಖಾಂತ್ಯ

ಬಂಟ್ವಾಳ : ಕಳೆದ 10 ದಿನಗಳ ಹಿಂದೆ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಮಾ. 8ರ ಶನಿವಾರ ಉಡುಪಿಯಲ್ಲಿ ಜೀವಂತ ಪತ್ತೆಯಾಗಿದ್ದಾನೆ.

ರಾಜ್ಯದಲ್ಲೇ ಬೆಚ್ಚಿ ಬೀಳಿಸಿದ ದಿಗಂತ್‌ ನಾಪತ್ತೆ ಪ್ರಕರಣ ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿತ್ತು. ಈತ ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಫೆ. 25ರ ಮಂಗಳವಾರ ಸಂಜೆ ದೇವಸ್ಥಾನಕ್ಕೆ ಹೋಗುವುದಾಗಿ ಮನೆಯಲ್ಲಿ ತಿಳಿಸಿದ್ದು, ಆದರೆ ದೇವಸ್ಥಾನಕ್ಕೆ ಹೋಗದೆ, ಮನೆಗೂ ಮರಳದೆ ನಾಪತ್ತೆಯಾಗಿದ್ದನು. ಆತನ ಚಪ್ಪಲಿಗಳು ಹಾಗೂ ಮೊಬೈಲ್ ಫೋನ್ ಮನೆಯ ಸಮೀಪದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿತ್ತು. ಇನ್ನು ಈ ಪ್ರಕರಣದ ಕುರಿತಾಗಿ ಪೊಲೀಸರು ಸರಿಯಾಗಿ ತನಿಖೆ ನಡೆಸುತ್ತಿಲ್ಲ ಎಂದು ಆರೋಪಿಸಿ ಫರಂಗಿಪೇಟೆಯಲ್ಲಿ ಪ್ರತಿಭಟನೆಯೂ ನಡೆದಿತ್ತು.

ರಾಜ್ಯ ಸರ್ಕಾರ ಹಾಗೂ ಪೊಲೀಸ್‌ ಇಲಾಖೆ ಗಂಭೀರವಾಗಿ ಪರಿಗಣಿಸಿ, 40ಕ್ಕೂ ಅಧಿಕ ಪೋಲೀಸರ ತಂಡ ಹುಡುಕಾಟ ನಡೆಸಿದ್ದರು. ಡಿಎಆರ್ ತಂಡದ 30 ಪೋಲೀಸರು, ರೈಲ್ವೆ ಪೋಲೀಸ್, ಅಗ್ನಿಶಾಮಕ ದಳ, ಎಫ್.ಎಸ್.ಎಲ್, ಡಾಗ್ ಸ್ಕಾಡ್, ಡೋನ್ ಕ್ಯಾಮೆರಾಗಳನ್ನು ಬಳಿಸಿ ಹುಡುಕಾಟ ನಡೆಸಿದ್ದರು. ಇದೀಗ ಇಂದು ದಿಗಂತ್‌ ಉಡುಪಿಯಲ್ಲಿ ಜೀವಂತವಾಗಿ ಪತ್ತೆಯಾಗಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ.

- Advertisement -

Related news

error: Content is protected !!