- Advertisement -
- Advertisement -



ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಸಂಸದ ತೇಜಸ್ವಿ ಸೂರ್ಯ ದಂಪತಿ ಸಮೇತ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.
ದುರ್ಗೆಯ ಮುಂದೆ ತೇಜಸ್ವಿ ಸೂರ್ಯ ದುರ್ಗಾ ಸೂಕ್ತ ಪಠಿಸಿದರು. ನವದಂಪತಿಗಳಿಗೆ ಲಕ್ಷ್ಮೀನಾರಾಯಣ ಆಸ್ರಣ್ಣ ದೇವರ ಶೇಷವಸ್ತ್ರ ನೀಡಿದರು. ನಂತರ ತೇಜಸ್ವೀ ಸೂರ್ಯ ದಂಪತಿ ಸಮೇತ ಕುಟುಂಬವರ್ಗದವರು ಅನ್ನಪ್ರಸಾದ ಸ್ವೀಕರಿಸಿದರು. ಮೂಲ ಕುದುರುಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭ ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರುಗುತ್ತು, ಅನಂತಪದ್ಮನಾಭ ಆಸ್ರಣ್ಣ, ಕಮಲಾದೇವಿ ಪ್ರಸಾದ್ ಆಸ್ರಣ್ಣ, ಹರಿನಾರಾಯಣ ಆಸ್ರಣ್ಣ, ಗೋಪಾಲಕೃಷ್ಣ ಆಸ್ರಣ್ಣ, ಪ್ರವೀಣ್ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.
- Advertisement -