Wednesday, November 4, 2026
spot_imgspot_img
spot_imgspot_img

ಬಂಟ್ವಾಳ : ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: ಇಬ್ಬರ ಬಂಧನ

- Advertisement -
- Advertisement -

ಬಂಟ್ವಾಳ : ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಆಟ ಆಡುತ್ತಿದ್ದ ವೇಳೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಪೋಲಿಸರು ಇಬ್ಬರನ್ನು ಬಂಧಿಸಿದ ಘಟನೆ ಬಿ.ಸಿ.ರೋಡು ಸಮೀಪದ ಕೈಕಂಬ ಎಂಬಲ್ಲಿ ನಡೆದಿದೆ.

ಬಂಟ್ವಾಳ ಮೂಡ ಗ್ರಾಮದ ಕೈಕಂಬ ಎಂಬಲ್ಲಿ ಖಾಸಗಿ ಕಟ್ಟಡವೊಂದರ ಬಳಿಯಲ್ಲಿ ಆಟಕ್ಕೆ ತಯಾರು ನಡೆಸುತ್ತಿದ್ದ ವೇಳೆ ದಾಳಿ ನಡೆಸಿದ ಪೋಲೀಸರು ಪ್ರಮುಖ ಆರೋಪಿಗಳಾದ ನಾವೂರ ನಿವಾಸಿ ಸುರೇಶ್ ಹಾಗೂ ಮಿತ್ತಬೈಲು ನಿವಾಸಿ ಭಾಸ್ಕರ ಎಂಬವರನ್ನು ಬಂಧಿಸಿದ್ದಾರೆ.ಬಂಧಿತರಿಂದ ಸುಮಾರು 3.500 ರೂ ನಗದು ಹಾಗೂ ಆಟಕ್ಕೆ ಬಳಸಿದ ಮಟ್ಕಾ ಎಲೆ, ಹಾಗೂ ಇತರ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -

Related news

error: Content is protected !!