Thursday, September 10, 2026
spot_imgspot_img
spot_imgspot_img

34 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

- Advertisement -
- Advertisement -

ಕಾರ್ಕಳ: ಸುಮಾರು 34 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಳೆಯ ಪ್ರಕರಣವೊಂದರ ಆರೋಪಿ, ಮಂಗಳೂರಿನ ಎಡಪದವು ನಿವಾಸಿ ಲಿಯೋ ರೋಚ್‌ (64) ಎಂಬಾತನನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಈತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಈತನ ವಿರುದ್ಧ ಕಾರ್ಕಳ ನಗರ ಠಾಣೆ ವ್ಯಾಪ್ತಿಯಲ್ಲಿ ಕೇಬಲ್‌ ಕಳವು ಮಾಡಿದ್ದ ಪ್ರಕರಣ ದಾಖಲಾಗಿತ್ತು.34 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಈತನ ಪತ್ತೆಗೆ ನ್ಯಾಯಾಲಯ ಲುಕ್‌ ಔಟ್‌ ವಾರಂಟ್‌ ಜಾರಿ ಮಾಡಿತ್ತು.ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

- Advertisement -

Related news

error: Content is protected !!