- Advertisement -
- Advertisement -


ರಸ್ತೆ ದಾಟುತ್ತಿದ್ದ ಮಹಿಳೆಯೋರ್ವರಿಗೆ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಘಟನೆ ಪರಂಗಿಪೇಟೆ ಬಳಿ ನಡೆದಿದೆ. ಮೃತ ಮಹಿಳೆಯನ್ನು 10 ನೇ ಮೈಲುಕಲ್ಲು ನಿವಾಸಿ ವಸಂತಿ ಶೆಟ್ಟಿ ಎಂದು ಗುರುತಿಸಲಾಗಿದೆ.
ಫರಂಗಿಪೇಟೆ ಸಮೀಪದ 10ನೇ ಮೈಲುಕಲ್ಲು ಎಂಬಲ್ಲಿ ಮಹಿಳೆಯೊಬ್ಬರು ರಸ್ತೆಬದಿಯಲ್ಲಿ ಅಗತ್ಯ ಸಾಮಾನು ತರಲೆಂದು ಅಂಗಿಡಿಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಮಂಗಳೂರು ಕಡೆಯಿಂದ ಬಿಸಿರೋಡು ಕಡೆಗೆ ರಭಸದಿಂದ ಬಂದ ಕಾರೊಂದು ಡಿಕ್ಕಿ ಮಹಿಳೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮಹಿಳೆ ಚೆಂಡಿನಂತೆ ಹೊರಳುತ್ತಾ ಬಸ್ ನಿಲ್ದಾಣದ ಒಳಗಿನಿಂದ ಅಷ್ಟು ದೂರಕ್ಕೆ ಎಸೆಯಲ್ಪಟ್ಟಿದ್ದಾರೆ. ಈ ದೃಶ್ಯ ಸಿಸಿ.ಟಿ.ವಿಯಲ್ಲಿ ಸೆರೆಯಾಗಿದೆ. ಈ ಬಗ್ಗೆ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -








