Saturday, June 28, 2025
spot_imgspot_img
spot_imgspot_img

ಹೆಣ್ಣು ಮಗುವಿನ ತಂದೆಯಾದ ಕೆ.ಎಲ್. ರಾಹುಲ್

- Advertisement -
- Advertisement -

ಮುಂಬೈ: ಟೀಂ ಇಂಡಿಯಾ ಆಟಗಾರ​​ ಕೆ.ಎಲ್​ ರಾಹುಲ್​ ಮತ್ತು ಬಾಲಿವುಡ್ ನಟಿ ಅಥಿಯಾ ಶೆಟ್ಟಿ ದಂಪತಿಗೆ ಹೆಣ್ಣು ಮಗು ಜನನವಾಗಿದೆ. ಈ ಶುಭಸುದ್ದಿಯನ್ನು ದಂಪತಿ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ.

ನಮಗೆ ಹೆಣ್ಣು ಮಗುವಿನ ಜನನವಾಗಿದೆ ಎಂದು ಕೆ.ಎಲ್​ ರಾಹುಲ್​ ಎಕ್ಸ್‌ನಲ್ಲಿ ಪೋಸ್ಟ್​ ಮಾಡಿದ್ದಾರೆ.

2023 ಜ.23ರಂದು ಕೆ.ಎಲ್ ರಾಹುಲ್ ಜೊತೆ ಅಥಿಯಾ ಅದ್ಧೂರಿಯಾಗಿ ಮದುವೆಯಾಗಿದ್ದರು. ಇನ್ನೂ ಕಳೆದ ನವೆಂಬರ್‌ನಲ್ಲಿ, ಅಥಿಯಾ ಶೆಟ್ಟಿ ತಾಯಿಯಾಗುತ್ತಿರುವ ವಿಚಾರವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದರು.

2024ರ ಐಪಿಎಲ್​ ಸೀಸನ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಆಡಿದ್ದ ಕೆಎಲ್ ರಾಹುಲ್ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿದಿದ್ದಾರೆ. ಲಕ್ನೋ ಸೂಪರ್​ ಜೈಂಟ್ಸ್​ ತಂಡವನ್ನು ತೊರೆದ ಕೆ.ಎಲ್​ ರಾಹುಲ್​​ ಐಪಿಎಲ್​ ಹರಾಜಿಗೆ ಬಂದಿದ್ದರು. 14 ಕೋಟಿ ರೂ.ಗೆ ಇವರನ್ನು ಡೆಲ್ಲಿ ಕ್ಯಾಪಿಟಲ್ಸ್ ಖರೀದಿ ಮಾಡಿದೆ. ತಂದೆಯಾದ ಸಂಭ್ರಮದಲ್ಲಿರೂ ಕೆ.ಎಲ್​ ರಾಹುಲ್​​ ಇಂದು ಸೇರಿ ಮೂರು ಪಂದ್ಯಗಳಿಗೆ ಲಭ್ಯರಿಲ್ಲ ಎನ್ನಲಾಗಿದೆ.

ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ವಿಕೆಟ್ ಕೀಪರ್ ಬ್ಯಾಟರ್, ವಿಶಾಖಪಟ್ಟಣಂನ ಡಾ. ವೈ.ಎಸ್. ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ತನ್ನ ಹಿಂದಿನ ಫ್ರಾಂಚೈಸ್ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ವಿರುದ್ಧದ ಪಂದ್ಯದಲ್ಲಿ ಆಡಲು ಸಾಧ್ಯವಾಗುತ್ತಿಲ್ಲ ಎಂದು ಡೆಲ್ಲಿ ಕ್ಯಾಪಿಟಲ್ಸ್ ಆಡಳಿತ ಮಂಡಳಿಯಿಂದ ವಿಶೇಷ ಅನುಮತಿ ಪಡೆದಿದ್ದರು.

- Advertisement -

Related news

error: Content is protected !!