

ಕೇಪು:ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ, ಕುದ್ದುಪದವು ನಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಶಾಲಾ ವಾರ್ಷಿಕೋತ್ಸವ ದಿನಾಂಕ 28-03-2025ರಂದು ನಡೆಯಿತು.
ವಿದ್ಯಾರ್ಥಿಗಳು ಶಿಸ್ತು, ಸಂಯಮ, ಸಂಸ್ಕಾರದಂತಹ ಉತ್ತಮ ಮೌಲ್ಯ ರೂಢಿಸಿಕೊಂಡು ಸಮಾಜದಲ್ಲಿ ಉತ್ತಮ ಪ್ರಜೆಗಳನ್ನಾಗಿಸಲು ವಿದ್ಯಾರ್ಥಿನಿಲಯದ ಶಿಕ್ಷಣವು ಪೂರಕವಾಗಿದೆ. ವಿದ್ಯಾರ್ಥಿಗಳು ತಮ್ಮ ಕಲಿಕೆಯ ಆಸಕ್ತಿಯನ್ನು ಪಠ್ಯ ಪುಸ್ತಕಗಳಿಗೆ ಸೀಮಿತಗೊಳಿಸದೆ ಪಠ್ಯೇತರ ಚಟುವಟಿಕೆಗಳಿಗೂ ಆಸಕ್ತಿ ಮೂಡಿಸಲು ಶಾಲಾ ವಾರ್ಷಿಕೋತ್ಸವ ಸಹಕಾರಿಯಾಗಿದೆ ಎಂದು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಮತ್ತು ಪೆರುವಾಯಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಎಂ. ಕುಂಞ ನಾಯ್ಕ ಇವರು ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ, ಕುದ್ದುಪದವು ಇಲ್ಲಿನ ಪ್ರತಿಭಾ ಪುರಸ್ಕಾರ ಮತ್ತು ಶಾಲಾ ವಾರ್ಷಿಕೋತ್ಸವದ ದೀಪ ಪ್ರಜ್ವಲಿಸಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.
ಇದೇ ಸಂದರ್ಭದಲ್ಲಿ ಸುವರ್ಣ ಸಂಭ್ರಮ ಸಮಿತಿ ಉಪಾಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ ಬೇಂಗ್ರೋಡಿ, ಕೋಶಾಧಿಕಾರಿ ಎ. ಗೋವಿಂದರಾಯ ಶೆಣೈ ಅಡ್ಯನಡ್ಕ, ಕೇಪು ಗ್ರಾಮ ಪಂಚಾಯತ್ ಸದಸ್ಯರಾದ ಜಗಜೀವನ್‌ರಾಮ್ ಶೆಟ್ಟಿ, ಪುರುಷೋತ್ತಮ ಗೌಡ ಕಲ್ಲಂಗಳ, ಅಬ್ದುಲ್ ಕರೀಮ್ ಉಪಸ್ಥಿತರಿದ್ದರು.
ಶಿಕ್ಷಕಿ ಗೀತಾ ಕುಮಾರಿ ಸ್ವಾಗತಿಸಿ, ಮಲ್ಲಿಕಾ ಬಿ. ವಂದಿಸಿದರು. ತುಳಸಿ, ಪಲ್ಲವಿ ಜಿ., ರಂಜಿತ ಸಿ.ಜೆ. ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ವಾಣಿಶ್ರೀ ಯಂ. ಸಭಾ ಕಾರ್ಯಕ್ರಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಿರೂಪಿಸಿದರು. ಬೋಧಕೇತರ ಸಿಬ್ಬಂದಿಗಳಾದ ಭಾಗೀರಥಿ ಯಸ್., ರತ್ನಾ ಕೆ., ಜ್ಯೋತಿ, ಲೀಲಾ, ಧರ್ಣಮ್ಮ , ಪುಷ್ಪಲತಾ ಡಿ. ಸಹಕರಿಸಿದರು. ಶೈಕ್ಷಣಿಕ ವರ್ಷದ ವರದಿಯನ್ನು ಶಾಲಾ ಮೇಲ್ವಿಚಾರಕಿ ಭವ್ಯ ಪಿ. ವಾಚಿಸಿದರು. ಸಭಾ ಕಾರ್ಯಕ್ರಮದ ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.