- Advertisement -
- Advertisement -


ಜನತೆಗೆ ಬೆಲೆ ಏರಿಕೆ ಬರೆ ಹಾಕಿರುವ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಏ.2ರಿಂದ ಪ್ರತಿಭಟನೆ ನಡೆಸಲಾಗುತ್ತಿದ್ದು, ಮೊದಲಿಗೆ ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.ಶನಿವಾರ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಏ.2ರಂದು ಫ್ರೀಡಂಪಾರ್ಕ್‌ನಲ್ಲಿ ಬೆಲೆ ಏರಿಕೆ ವಿರುದ್ಧ ಬೆಳಗ್ಗೆಯಿಂದ ಧರಣಿ ಆರಂಭಿಸಲಾಗುವುದು.
ಅಂದು ಅಹೋರಾತ್ರಿ ಧರಣಿ ನಡೆಸಲು ತೀರ್ಮಾನಿಸಲಾಗಿದೆ. ಬಿಜೆಪಿಯ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು, ಜಿಲ್ಲಾ ಅಧ್ಯಕ್ಷರು, ರಾಜ್ಯದ ಎಲ್ಲ ಪದಾಧಿಕಾರಿಗಳು ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನಿಡಿದರು.
- Advertisement -