Monday, June 22, 2026
spot_imgspot_img
spot_imgspot_img

ಮಂಡ್ಯ: ತೂಬಿನಕೆರೆ ಹೈವೇನಲ್ಲಿ ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ಸಾವು…!

- Advertisement -
- Advertisement -

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಕಾರಿಗೆ ಐರಾವತ ಬಸ್ ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲ್ಲೂಕು ತೂಬಿನಕೆರೆ ಎಕ್ಸಿಟ್ ಬಳಿ ನಡೆದಿದೆ.

ಕಾರು ಮೈಸೂರು ಕಡೆಗೆ ಹೊರಟಿತ್ತು. ಈ ವೇಳೆ ಎಕ್ಸ್‌ಪ್ರೆಸ್‌ವೇನಿಂದ ಎಕ್ಸಿಟ್ ಆಗುವಾಗ ಕಾರು ಚಾಲಕನಿಗೆ ಗೊಂದಲ ಉಂಟಾಗಿದ್ದು, ಮತ್ತೆ ಕಾರನ್ನು ಎಕ್ಸ್‌ಪ್ರೆಸ್‌ ವೇಗೆ ತಿರುಗಿಸಿದ್ದಾನೆ. ಇದೇ ವೇಳೆ ಹಿಂದಿನಿಂದ ಕೆಎಸ್‌ಆರ್‌ಟಿಸಿ ಐರಾವತ ಬಸ್ ಬಂದಿದ್ದು, ಎದುರಿಗೆ ಬಂದ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ.

ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದವರ ಗುರುತು ಪತ್ತೆಯಾಗಿಲ್ಲ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

- Advertisement -

Related news

error: Content is protected !!