Sunday, November 1, 2026
spot_imgspot_img
spot_imgspot_img

ವಿನಯ್‌ ಸೋಮಯ್ಯ ಆತ್ಮಹತ್ಯೆ ಪ್ರಕರಣ: ಕಾಂಗ್ರೆಸ್‌ ಶಾಸಕ ಸೇರಿ ಮೂವರ ಮೇಲೆ ಎಫ್‌ಐಆರ್

- Advertisement -
- Advertisement -

ಬೆಂಗಳೂರು: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಗೋಣಿಮರೂರು ಗ್ರಾಮದ ನಿವಾಸಿ, ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣ ಸಂಬಂಧ ಇದೀಗ ಮೂವರ ವಿರುದ್ಧ ದೂರು ದಾಖಲಾಗಿದೆ.

ಕೊಡಗಿನ ಕಾಂಗ್ರೆಸ್ ಶಾಸಕರಾದ ಎ.ಎಸ್. ಪೊನ್ನಣ್ಣ, ಮಂಥರ್‌ ಗೌಡ ಹಾಗೂ ರಾಜೀವ್ ಗಾಂಧಿ ಪಂಚಾಯತ್‌ರಾಜ್ ಸಂಘಟನೆಯ ಕೊಡಗು ಜಿಲ್ಲಾಧ್ಯಕ್ಷ ತನ್ನೀರಾ ಮೈನಾ ಅವರ ವಿರುದ್ಧ ಹೆಣ್ಣೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಮೂವರ ಕಿರುಕುಳದಿಂದ ಸಹೋದರ ಆತ್ಮಹತ್ಯೆ ಮಾಡಿಕೊಂಡಿದ್ದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿ ವಿನಯ್ ಸೋಮಯ್ಯ ಅವರ ಸಹೋದರ ಜೀವನ್ ಸೋಮಯ್ಯ ದೂರಿನಂತೆ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!