Tuesday, July 28, 2026
spot_imgspot_img
spot_imgspot_img

ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ; ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಮೂವರು ಮಹಿಳೆಯರ ದುರ್ಮರಣ

- Advertisement -
- Advertisement -

ಹುಬ್ಬಳ್ಳಿ: ನಗರದ ಹೊರವಲಯದ ನೂಲ್ವಿ ಕ್ರಾಸ್‌ನಲ್ಲಿ ರಸ್ತೆ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಮಹಿಳೆಯರು ದುರ್ಮರಣ ಹೊಂದಿರುವ ಘಟನೆ ಭಾನುವಾರ ನಡೆದಿದೆ. ಕಾರು ವರೂರ ಗ್ರಾಮದಿಂದ ಹುಬ್ಬಳ್ಳಿಯತ್ತ ಬರುತ್ತಿತ್ತು. ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಮೂವರು ಮಹಿಳೆಯರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ.

ಮೃತರು ಹುಬ್ಬಳ್ಳಿಯ ಲಿಂಗರಾಜ ನಗರದ ನಿವಾಸಿಗಳು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!