Thursday, August 6, 2026
spot_imgspot_img
spot_imgspot_img

2,000 ಕೋಟಿ ವೆಚ್ಚದ SWD ಕಾಮಗಾರಿಗಳಲ್ಲಿ ಶೇ 15ರಷ್ಟು ಕಮಿಷನ್‌: ಡಿಕೆಶಿ ವಿರುದ್ಧ BJP ಶಾಸಕ ಮುನಿರತ್ನ ಗಂಭೀರ ಆರೋಪ, ರಾಜ್ಯಪಾಲರಿಗೆ ದೂರು

- Advertisement -
- Advertisement -

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗುತ್ತಿರುವ 2,000 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶೇ 15ರಷ್ಟು ಕಮಿಷನ್‌ ಪಡೆದಿದ್ದಾರೆ ಎಂದು ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರು ಗಂಭೀರ ಆರೋಪ ಮಾಡಿದ್ದು, ಈ ಸಂಬಂಧ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್ ಅವರಿಗೆ ದೂರು ನೀಡಿದ್ದಾರೆ.ನಿನ್ನೆ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ ಅವರು, ಆರೋಪಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಿದ್ದಾರೆ. ಜೊತೆಗೆ, ‘ಈ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೆಶನಾಲಯ ಮತ್ತು ಸಿಬಿಐಗೆ ದೂರು ನೀಡಿದ್ದು, ಡಿ.ಕೆ.ಶಿವಕುಮಾರ್‌ ವಿರುದ್ಧ ಅಪರಾಧ ಪ್ರಕರಣ ದಾಖಲಿಸಲು ಅನುಮತಿ ನೀಡಿ ಎಂದು ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ರಾಜಾಕಾಲುವೆ ಕಾಮಗಾರಿಗಳ ಟೆಂಡರ್‌ಗಳಲ್ಲಿ 2 ಸಾವಿರ ಕೋಟಿ ರೂ. ಅವ್ಯವಹಾರ ಆಗಿದೆ. ವರ್ಲ್ಡ್ ಬ್ಯಾಂಕ್‌ನಿಂದ 2 ಸಾವಿರ ಕೋಟಿ ರೂ. ಸಾಲ ಪಡೆದು, ((1) ಸ್ಟಾರ್ ಇನ್ಫ್ರಾಟೆಕ್ ಅಕಾ ಸ್ಟಾರ್ ಬಿಲ್ಡರ್ಸ್ ಅಂಡ್ ಡೆವಲಪರ್ಸ್ (2) ಗಣಪತಿ ಸ್ಟೋನ್ ಕ್ರಷರ್ ಪ್ರೈವೇಟ್ ಲಿಮಿಟೆಡ್ (3) ರಾಮಲಿಂಗಂ ಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್ (4) ಮನು ಕನ್ಸ್ಟ್ರಕ್ಷನ್ಸ್ (5) ಡಿ.ಎಚ್. ​​ಪಟೇಲ್ (6) ಎಲ್ಐಎ ಕನ್ಸ್ಟ್ರಕ್ಷನ್ಸ್ (7) ತಿರುಮಲ ಗಿರಿ ಕನ್ಸ್ಟ್ರಕ್ಷನ್ಸ್ (8) ಓಷನ್ ಕನ್ಸ್ಟ್ರಕ್ಷನ್ಸ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್ (9) ವಿಡಿಬಿ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್ (10) ಆರ್ಎನ್ಎಸ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ಮತ್ತು (11) ಬಿಎಸ್ಆರ್ ಕನ್ಸ್ಟ್ರಕ್ಷನ್ಸ್ ಕಂಪನಿಗಳಿಂದ ದೊಡ್ಡ ಮೊತ್ತದ ಕಮಿಷನ್ ಪಡೆದು ಟೆಂಡರ್ ಕೊಡಲಾಗಿದೆ ಎಂದು ಆರೋಪಿಸಿದ್ದಾರೆ.

- Advertisement -

Related news

error: Content is protected !!