Sunday, August 16, 2026
spot_imgspot_img
spot_imgspot_img

ಕುಂದಾಪುರ: ಕಾರು ಡಿಕ್ಕಿ ಹೊಡೆದು ಪಾದಚಾರಿ ಮಹಿಳೆ ಸಾವು..!

- Advertisement -
- Advertisement -

ಕುಂದಾಪುರ: ಕಾರು ಡಿಕ್ಕಿ ಹೊಡೆದು ಪಾದಚಾರಿ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಣೂರು ರಾಜಲಕ್ಷ್ಮಿ ಸಭಾ ಭವನ ಬಳಿ ನಡೆದಿದೆ.

ಮೃತಪಟ್ಟ ಮಹಿಳೆಯನ್ನು ಗಿಳಿಯಾರು ಹೊನ್ನಾರಿಯ ಗಿರಿಜಾ ಪೂಜಾರ್ತಿ (65) ಎಂದು ಗುರುತಿಸಲಾಗಿದೆ.

ಬನ್ನಾಡಿಯಿಂದ ಕುಂದಾಪುರ ಕಡೆ ಹೋಗುತ್ತಿದ್ದ ಕಾರೊಂದು ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ಗಂಭೀರ ಗಾಯಗೊಂಡ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಕೋಟ ಪೊಲೀಸ್ ಠಾಣೆಯ ಎಎಸ್‌ಐ ಗೋಪಾಲ್ ಪೂಜಾರಿ, ಸಿಬ್ಬಂದಿ ಅಶೋಕ್ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ದೇಹವನ್ನು ಕೋಟ ಜೀವನ್ ಮಿತ್ರ ನಾಗೇಂದ್ರ ಪುತ್ರನ್ ರವರು ಮರಣೋತ್ತರ ಪರೀಕ್ಷೆಗೆ ಕುಂದಾಪುರಕ್ಕೆ ಸಾಗಿಸಿದ್ದಾರೆ.

- Advertisement -

Related news

error: Content is protected !!