- Advertisement -
- Advertisement -




ನಿರ್ವಹಣಾ ಕಾಮಗಾರಿಯ ಕಾರಣ ಏ. 15ರಿಂದ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಬಂದ್ ಆಗಲಿದೆ. ಟರ್ಮಿನಲ್ 2ರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಲ್ಲಾ ವಿಮಾನಗಳನ್ನು ಟರ್ಮಿನಲ್ 1 ಮತ್ತು 3ಕ್ಕೆ ಸ್ಥಳಾಂತರಿಸಲಾಗುತ್ತದೆ ಎಂದು ಡಿಐಎಎಲ್ ತಿಳಿಸಿದೆ.
ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ದುರಸ್ತಿ ಮತ್ತು ನವೀಕರಣ ಕಾರ್ಯಗಳಿಗೆ ಅನುಕೂಲವಾಗುವಂತೆ 4 ತಿಂಗಳ ಕಾಲ ಮುಚ್ಚಲಾಗುವುದು. ಹಾಗಾಗಿ ಟರ್ಮಿನಲ್ 1 ಮತ್ತು ಟರ್ಮಿನಲ್ 3ರಲ್ಲಿ ಮಾತ್ರ ವಿಮಾನಗಳು ಕಾರ್ಯನಿರ್ವಹಿಸಲಿದೆ. ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಬರುವ ಮೊದಲು ತಮ್ಮ ವಿಮಾನದ ಟರ್ಮಿನಲ್ ಮಾಹಿತಿಯನ್ನು ಪರಿಶೀಲಿಸಿ ಎಂದು ದೆಹಲಿ ಅಂತರಾಷ್ಟ್ರೀಯ ಏರ್ಪೋರ್ಟ್ ಲಿಮಿಟೆಡ್ ಪ್ರಯಾಣಿಕರಿಗೆ ಸೂಚನೆ ನೀಡಿದೆ.
- Advertisement -