Sunday, June 29, 2025
spot_imgspot_img
spot_imgspot_img

1ನೇ ತರಗತಿ ಸೇರ್ಪಡೆಗೆ ಮಕ್ಕಳ ವಯೋಮಿತಿ ಸಡಿಲ: ಸಚಿವ ಮಧು ಬಂಗಾರಪ್ಪ ಘೋಷಣೆ

- Advertisement -
- Advertisement -

ಬೆಂಗಳೂರು: ಶಾಲಾ ಮಕ್ಕಳ ದಾಖಲಾತಿ ವಯೋಮಿತಿ ವಿಚಾರದಲ್ಲಿ ಪೋಷಕರ ಒತ್ತಡಕ್ಕೆ ಶಿಕ್ಷಣ ಇಲಾಖೆ ಕೊನೆಗೂ ಮಣಿದಿದ್ದು, 1ನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು ಕರ್ನಾಟಕ ಶಿಕ್ಷಣ ಇಲಾಖೆ ತುಸು ಸಡಿಲಗೊಳಿಸಿದೆ.

ಮಕ್ಕಳಿಗೆ 5 ವರ್ಷ 5 ತಿಂಗಳು ಆಗಿದ್ದರೂ ಅವರು ಶಾಲೆಗೆ ದಾಖಲಾಗಲು ಅವಕಾಶ ನೀಡಲಾಗುತ್ತದೆ. ಇದಕ್ಕೂ ಮುನ್ನ ರಾಜ್ಯ ಪಠ್ಯಕ್ರಮದಲ್ಲಿ 1ನೇ ತರಗತಿಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳಲು 6 ವರ್ಷ ಆಗಿರಬೇಕಾಗಿರುವುದು ಕಡ್ಡಾಯವಾಗಿತ್ತು. ಎಸ್‌ಇಪಿ ವರದಿ ಆಧಾರದ ಮೇಲಿನ ಕಡ್ಡಾಯ 6 ವರ್ಷ ವಯೋಮಿತಿಯನ್ನು ಸಡಿಲಿಸಲಾಗಿದೆ. ಆದರೆ, ಒಂದನೇ ತರಗತಿ ಸೇರ್ಪಡೆಗೆ ಯುಕೆಜಿ ಆಗಿರಬೇಕು. ಆದರೆ, ಇದು ಈ ವರ್ಷಕ್ಕೆ ಮಾತ್ರ ಅನ್ವಯ. ಮುಂದಿನ ವರ್ಷದಿಂದ ಕಡ್ಡಾಯ ವಯೋಮಿತಿ 6 ವರ್ಷವೇ ಇರಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ.

ಎಲ್‌ಕೆಜಿ, ಯುಕೆಜಿ ಆಗಿದ್ದರೆ ಮಾತ್ರ 1ನೇ ತರಗತಿಗೆ ಪ್ರವೇಶ. ಮಕ್ಕಳಿಗೆ 5 ವರ್ಷ 5 ತಿಂಗಳಾಗಿರಬೇಕು. ಪೋಷಕರ ಒತ್ತಾಯದ ಮೇರೆಗೆ ಈ ವರ್ಷ ಮಾತ್ರ ಅವಕಾಶ. ಮುಂದಿನ ಶೈಕ್ಷಣಿಕ ವರ್ಷದಿಂದ ಕಡ್ಡಾಯವಾಗಿ 6 ವರ್ಷ ತುಂಬಿರಬೇಕು ಎಂದು ಅವರು ಘೋಷಿಸಿದ್ದಾರೆ.

- Advertisement -

Related news

error: Content is protected !!