- Advertisement -
- Advertisement -





24 ವರ್ಷಗಳ ಹಿಂದಿನ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ನರ್ಮದಾ ಬಚಾವೋ ಆಂದೋಲನದ ನಾಯಕಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅವರನ್ನು ಇಂದು ಬಂಧಿಸಲಾಗಿದೆ.
ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಷೇನಾ ಅವರು 24 ವರ್ಷಗಳ ಹಿಂದೆ ಹೂಡಿರುವ ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧ ಪ್ರೊಬೇಷನ್ ಬಾಂಡ್‌ಗಳನ್ನು ಸಲ್ಲಿಸದ ಕಾರಣ ಪಾಟ್ಕರ್ ವಿರುದ್ಧ ದೆಹಲಿ ನ್ಯಾಯಾಲಯ ಬುಧವಾರ (ಏ.23) ಜಾಮೀನು ರಹಿತ ವಾರಂಟ್ ಹೊರಡಿಸಿತ್ತು. ಈ ಹಿನ್ನೆಲೆ ಆಗ್ನೆಯ ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿರುವ ಪಾಟ್ಕರ್ ಅವರ ನಿವಾಸಕ್ಕೆ ಇಂದು ಬೆಳಿಗ್ಗೆ ತೆರಳಿದ ಪೊಲೀಸರು ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
- Advertisement -